ಮೂಲ್ಕಿ: ಕಾರಿಗೆ ಸ್ಕೂಟರ್ ಢಿಕ್ಕಿಯಾಗಿ ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ಮೂಲ್ಕಿ ಬಸ್ ತಂಗುದಾಣದ ಬಳಿ ಸಂಭವಿಸಿದೆ.
ಮೂಲ್ಕಿ ಸಮೀಪದ ಕಕ್ವ ನಿವಾಸಿ ಶಶಿಕುಮಾರ್ (26) ಮೃತ ವ್ಯಕ್ತಿ.
ಸ್ಕೂಟರ್ ನಲ್ಲಿ ಹೆದ್ದಾರಿ ದಾಟುತ್ತಿದ್ದ ವೇಳೆ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ.ಅಪಘಾತದ ರಭಸಕ್ಕೆ ಕಾರು ಸ್ಕೂಟರನ್ನು ಎಳೆದುಕೊಂಡು ಹೋಗಿದ್ದು, ಸ್ಕೂಟರ್ ಸವಾರನ ತಲೆಗೆ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿತ್ತು.
ಸ್ಥಳೀಯರು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲು ನೆರವಾದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಶಶಿಕುಮಾರ್ ಪೈಂಟಿಂಗ್ ವೃತ್ತಿ ಮಾಡುತ್ತಿದ್ದರು.

























