ಅಳದಂಗಡಿ: ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ವತಿಯಿಂದ ಗ್ರಾಮೀಣ ವಿದ್ಯಾರ್ಥಿಗಳಿಗೆ 24ನೇ ವರ್ಷದ ಉಚಿತ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮ ಹಾಗೂ ಕಂಪ್ಯೂಟರ್ ವಿತರಣೆ ಕಾರ್ಯಕ್ರಮ ಅಳದಂಗಡಿಯ ಸೋಮನಾಥೇಶ್ವರಿ ದೇವಸ್ಥಾನದ ವಠಾರದಲ್ಲಿ ನಡೆಯಿತು.
ಭಾರತೀಯ ಕಬಡ್ಡಿ ತಂಡದ ನಾಯಕ ಪವನ್ ಶೆಹ್ರಾವತ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಆರೋಗ್ಯ ಸಚಿವ ಯು ಟಿ ಖಾದರ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮಾಡಿ,ಶುಭ ಹಾರೈಸಿದರು.ದುಬೈ ನಾರಾಯಣ ದೇವಾಡಿಗರವರು ದಾನ ನೀಡಿದ ಎರಡು ಕಂಪ್ಯೂಟರನ್ನು ಬಡಗಕಾರಂದೂರು ಶಾಲೆಗೆ ಕೊಡುಗೆ ನೀಡಲಾಯಿತು. ಪಿ ಯು ಸಿ ಮತ್ತು ಎಸ್ ಎಸ್ ಎಲ್ ಸಿಯಲ್ಲಿ ರ್ಯಾಂಕ್ ಪಡೆದ ತಾಲೂಕಿನ ಸಾಧಕರನ್ನು ಸನ್ಮಾನಿಸಲಾಯಿತು.
ಜೊತೆಗೆ ಮಹಿಳೆಯರಿಗೆ ವಸ್ತ್ರದಾನ ನೇರವೇರಿಸಲಾಯಿತು. ಕಾರ್ಯಕ್ರಮದಲ್ಲಿ ನಿವೃತ್ತ ವೀರ ಯೋಧರಾದ ಎಸಿಪಿ ನಾಯಕ್ ಸುಬೇದಾರ್ ಎನ್ ಪಿ ತಂಗಚ್ಚನ್, ರೂಬಿನ್ ಜೋಸೆಫ್ ರವರನ್ನು ಸನ್ಮಾನಿಸಲಾಯಿತು. ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್ ರವರನ್ನು ಗೌರವಿಸಲಾಯಿತು.
ರಕ್ತದಾನ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ: ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನ ಅಳದಂಗಡಿ, ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರ(ರಿ), ಅಳದಂಗಡಿ ಇದರ ನೇತೃತ್ವದಲ್ಲಿ ಕೆ ಎಂ ಸಿ ಆಸ್ಪತ್ರೆ ಮಂಗಳೂರು,ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್ ಮಂಗಳೂರು ಇದರ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ನೆರವೇರಿಸಲಾಯಿತು.ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ|ಪದ್ಮಪ್ರಸಾದ ಅಜಿಲರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ಮೆಸ್ಕಾಂ ಹರೀಶ್ ಕುಮಾರ್, ಬೆಸ್ಟ್ ಪೌಂಡೇಷನ್ ಅಧ್ಯಕ್ಷ ರಕ್ಷಿತ್ ಶಿವರಾಂ, ರಾಷ್ಟ್ರೀಯ ಕಬಡ್ಡಿ ಆಟಗಾರರಾದ ಸುಕೇಶ್ ಹೆಗ್ಡೆ, ಮೋಹಿತ್ ಕುಮಾರ್,ಅಮೆಚೂರು ಕಬಡ್ಡಿ ಅಸೋಸೊಯೇಷನ್ ಬೆಳ್ತಂಗಡಿಯ ಅಧ್ಯಕ್ಷ ರಂಜನ್ ಜಿ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಸತ್ಯದೇವತೆ ದೈವಸ್ಥಾನ ಅಳದಂಗಡಿಯ ಆಡಳಿತದಾರರಾದ ಶಿವಪ್ರಸಾದ ಅಜಿಲರು ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿ,ಅತಿಥಿಗಳನ್ನು ಸ್ವಾಗತಿಸಿದರು.ಪಿ ಹೆಚ್ ನಿತ್ಯಾನಂದ ಶೆಟ್ಟಿ ನೊಚ್ಚ, ಪ್ರಜ್ಞಾ ಓಡಿಲ್ನಾಳ, ಸಮೀಕ್ಷಾ ಶಿರ್ಲಾಲು ನಿರೂಪಿಸಿದ ಕಾರ್ಯಕ್ರಮದಲ್ಲಿ ಶ್ರೇಯಾ ದೇವಾಡಿಗ ಪ್ರಾರ್ಥನೆ ಮಾಡಿದರು.ವಿಜಯಕುಮಾರ್ ಧನ್ಯವಾದವಿತ್ತರು.


























