ವಿಟ್ಲ, ಜೂನ್ 15: ವಿಟ್ಲ- ಕಲ್ಲಡ್ಕ ಕಡೆಗೆ ಸಾಗುವ ರಸ್ತೆಯಲ್ಲಿ ಕಾಮಗಾರಿ ಆರಂಭವಾಗಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ.
ಕಾಮಗಾರಿಯ ಅವಧಿಯಲ್ಲಿ ವಿಟ್ಲದ ನಾಲ್ಕು ರಸ್ತೆಗಳ ಜಂಕ್ಷನ್‌ನಿಂದ ದೇವಸ್ಥಾನ ರಸ್ತೆ ಮೂಲಕ ಕಲ್ಲಡ್ಕ ಕಡೆಗೆ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದ್ದು, ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.
ಭಾರೀ ವಾಹನಗಳು ಚಂದಳಿಕೆ – ಉರಿಮಜಲು – ಕಬಕ ಮಾರ್ಗವಾಗಿ ಸಂಚರಿಸುವಂತೆ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ. ಸಾರ್ವಜನಿಕರು ಹಾಗೂ ವಾಹನ ಚಾಲಕರು ಪರ್ಯಾಯ ಮಾರ್ಗವನ್ನು ಬಳಸುವಂತೆ ಸೂಚಿಸಲಾಗಿದೆ.
ಈ ಕುರಿತು ಮಾಹಿತಿ ನೀಡುವ ಸಲುವಾಗಿ ಪೊಲೀಸರು ಸ್ಥಳದಲ್ಲಿ ಸೂಚನಾ ಫಲಕಗಳನ್ನು ಅಳವಡಿಸಿದ್ದು, ಸಂಚಾರ ವ್ಯವಸ್ಥೆ ಸುಗಮಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ.
ರಸ್ತೆ ಕಾಮಗಾರಿ ಪೂರ್ಣಗೊಳ್ಳುವವರೆಗೆ ವಾಹನ ಸವಾರರು ಪೊಲೀಸ್ ಇಲಾಖೆಯ ಸೂಚನೆಗಳನ್ನು ಪಾಲಿಸಿ ಸಹಕರಿಸುವಂತೆ ಮನವಿ ಮಾಡಲಾಗಿದೆ.


























