ಬಂಟ್ವಾಳ :ಜ್ವರದಿಂದ ಬಳಲುತ್ತಿದ್ದ ಐದು ವರ್ಷದ ಬಾಲಕಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಗ್ರಾಮದಲ್ಲಿ ನಡೆದಿದೆ.
ಅಲ್ಲಿಪಾದೆಯ ಅನೇಜ ಛಾಯ ಅವರ ಪುತ್ರಿ ಅರ್ನಿಕಾ (5) ಮೃತಪಟ್ಟ ಬಾಲಕಿಯಾಗಿದ್ದಾಳೆ. ಆಕೆ ಬಂಟ್ವಾಳ ದೇವಳ ಶಾಲೆಯ ಯುಕೆಜಿ ವಿದ್ಯಾರ್ಥಿನಿಯಾಗಿದ್ದಳು.
ಮೂಲಗಳ ಪ್ರಕಾರ, ಅರ್ನಿಕಾ ಕಳೆದ ಶುಕ್ರವಾರ ಎಂದಿನಂತೆ ಶಾಲೆಗೆ ತೆರಳಿದ್ದಳು. ಶನಿವಾರ ಶಾಲೆಗೆ ರಜೆ ಇದ್ದು, ಬಳಿಕ ಭಾನುವಾರ ಆಕೆಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಚಿಕಿತ್ಸೆ ನೀಡಿದರೂ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಆಕೆ ಕೊನೆಯುಸಿರೆಳೆದಿದ್ದಾಳೆ ಎಂದು ತಿಳಿದುಬಂದಿದೆ.
ಬಾಲಕಿಯ ಅಕಾಲಿಕ ನಿಧನದಿಂದ ಕುಟುಂಬಸ್ಥರು ಹಾಗೂ ಗ್ರಾಮಸ್ಥರಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.


























