ಬೆಳ್ತಂಗಡಿ: ಚಾರ್ಮಾಡಿ ರಸ್ತೆಯಲ್ಲಿ ಇಂದು ಪೊಲೀಸ್ ವಾಹನವೊಂದು ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾದ ಘಟನೆ ನಡೆದಿದೆ.
ಮಾಹಿತಿಯ ಪ್ರಕಾರ, ಚಾರ್ಮಾಡಿ ಮಾರ್ಗವಾಗಿ ಬೆಂಗಳೂರಿನತ್ತ ತೆರಳುತ್ತಿದ್ದ ಪೊಲೀಸ್ ಕಾರು ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಹಠಾತ್ತನೆ ಸ್ಕಿಡ್ ಆಗಿ ಚಾಲಕರ ನಿಯಂತ್ರಣ ಕಳೆದುಕೊಂಡಿದೆ. ಪರಿಣಾಮ ವಾಹನ ರಸ್ತೆ ಮಧ್ಯೆಯೇ ಪಲ್ಟಿಯಾಗಿದೆ.
ಅಪಘಾತದ ಶಬ್ದ ಕೇಳಿ ಸ್ಥಳೀಯರು ಹಾಗೂ ಇತರ ವಾಹನ ಸವಾರರು ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಕೈಗೊಂಡರು. ವಾಹನದಲ್ಲಿದ್ದವರನ್ನು ಹೊರತೆಗೆದು ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತು.
ಅದೃಷ್ಟವಶಾತ್, ವಾಹನದಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತದಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಬಳಿಕ ಪರಿಸ್ಥಿತಿ ಸಹಜಗೊಂಡಿದೆ. ಅಪಘಾತಕ್ಕೆ ಸ್ಕಿಡ್ ಆಗಿರುವುದೇ ಕಾರಣ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.


























