ಉಪ್ಪಿನಂಗಡಿ: ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಉಪ್ಪಿನಂಗಡಿ ಪೊಲೀಸರು ತಪಾಸಣೆ ನಡೆಸಿ ಇಬ್ಬರನ್ನು ಬಂಧಿಸಿರುವ ಘಟನೆ ಬುಧವಾರ ನಸುಕಿನ ಜಾವ ನಡೆದಿದೆ.
ಹಾಸನದಿಂದ ಮಂಗಳೂರಿನತ್ತ ತೆರಳುತ್ತಿದ್ದ ಈಚರ್ ಲಾರಿಯನ್ನು ಬಜರಂಗದಳದ ಮಾಹಿತಿ ಆಧರಿಸಿ ನೆಕ್ಕಿಲಾಡಿ ಪ್ರದೇಶದಲ್ಲಿ ಗಸ್ತು ನಿರತ ಪೊಲೀಸರು ತಡೆದು ಪರಿಶೀಲನೆ ನಡೆಸಿದರು. ಈ ವೇಳೆ ಲಾರಿಯಲ್ಲಿ 16 ಜಾನುವಾರುಗಳನ್ನು ಸಾಗಿಸಲಾಗುತ್ತಿದ್ದುದು ಪತ್ತೆಯಾಯಿತು.
ಕಾರ್ಯಾಚರಣೆಯ ಸಂದರ್ಭದಲ್ಲಿ ಓರ್ವ ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.


























