ದೇವರಕೊಲ್ಲಿ ಸಮೀಪ ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಕಲ್ಲುಗುಂಡಿ ಹೊರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇಬ್ಬರು ಸಿಬ್ಬಂದಿಗಳು ಗಾಯಗೊಂಡ ಘಟನೆ ಜೂನ್ 17ರಂದು ನಡೆದಿದೆ.
ಗಾಯಾಳುಗಳಲ್ಲಿ ಓರ್ವರು ಪೊಲೀಸ್ ಸಿಬ್ಬಂದಿಯಾಗಿದ್ದು, ಮತ್ತೋರ್ವರು ಗೃಹ ರಕ್ಷಕ ದಳದ ಸಿಬ್ಬಂದಿ ಎಂದು ತಿಳಿದುಬಂದಿದೆ. ಮಡಿಕೇರಿಯಲ್ಲಿ ಕರ್ತವ್ಯ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಗಾಯಗೊಂಡ ಇಬ್ಬರನ್ನೂ ತಕ್ಷಣ ಆಂಬುಲೆನ್ಸ್ ಮೂಲಕ ಸುಳ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.


























