ಗುರುವಾಯನಕೆರೆ: ರಾಷ್ಟ್ರೀಯ ಹೆದ್ದಾರಿಯ ಪಿಲಿಚಂಡಿಕಲ್ಲು ಶಾಲೆ ಸಮೀಪ ಜೂನ್ 16ರಂದು ಎರಡು ಕಾರು ಹಾಗೂ ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿದೆ.
ಮಂಗಳೂರಿನಿಂದ ಚಿಕ್ಕಮಗಳೂರು ಕಡೆಗೆ ಸಾಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ, ಎದುರಿನಿಂದ ಬರುತ್ತಿದ್ದ ಮತ್ತೊಂದು ಕಾರು ಹಾಗೂ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಬೈಕ್ ಸವಾರ ರಸ್ತೆಗೆ ಬಿದ್ದು ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ರಭಸಕ್ಕೆ ಒಂದು ಕಾರು ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.



























