ಪುತ್ತೂರು: ಬಿರುವೆರ್ ಕುಡ್ಲ ಪುತ್ತೂರು ಘಟಕದ ವತಿಯಿಂದ ಶಾಲಾ ಮಕ್ಕಳಿಗೆ ಯೋಗ ಸಮವಸ್ತ್ರ ವಿತರಣಾ ಕಾರ್ಯಕ್ರಮ ಇಂದು ಪುಣಚ ಗ್ರಾಮದ ತೋರಣಕಟ್ಟೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಬಿರುವೆರ್ ಕುಡ್ಲ ಪುತ್ತೂರು ಘಟಕದ ಅಧ್ಯಕ್ಷ ಜನಾರ್ಧನ ಪೂಜಾರಿ ಪಡುಮಲೆ ಭಾಗವಹಿಸಿ ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ವಿತರಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ಮನೋಹರ್ ರೈ ಮೇಲ್ಮಜಲು, ಗೌರವಾಧ್ಯಕ್ಷ ಜಗದೀಶ್ ಅಮೀನ್ ನಡುಬೈಲು, ಕಾರ್ಯದರ್ಶಿ ಪ್ರವೀಣ್ ಸಣ್ಣಗುತ್ತು, ಕೋಶಾಧಿಕಾರಿ ಶರತ್ ಕುಮಾರ್ ಬಡಾವು ಹಾಗೂ ಸಂಚಾಲಕ ಧನಂಜಯ ಪಟ್ಲ ಕಲ್ಲೆಗ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಬಿರುವೆರ್ ಕುಡ್ಲ ಪುತ್ತೂರು ಘಟಕದ ಪದಾಧಿಕಾರಿಗಳು, ಸದಸ್ಯರು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದರು. ವಿದ್ಯಾರ್ಥಿಗಳ ಯೋಗಾಭ್ಯಾಸಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಸಮವಸ್ತ್ರಗಳನ್ನು ವಿತರಿಸಲಾಯಿತು. ಶಾಲಾ ಆಡಳಿತ ಮಂಡಳಿ ಹಾಗೂ ಪೋಷಕರು ಬಿರುವೆರ್ ಕುಡ್ಲ ಪುತ್ತೂರು ಘಟಕದ ಈ ಸಾಮಾಜಿಕ ಸೇವಾ ಕಾರ್ಯವನ್ನು ಶ್ಲಾಘಿಸಿದರು.



























