ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಹುಕಾಲದ ಬೇಡಿಕೆಯಾಗಿದ್ದ ಅರಳ ಗ್ರಾಮದ ಅರ್ಭಿ–ದೆಂಬುಡೆ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ರೂ.20 ಲಕ್ಷಗಳ ವಿಶೇಷ ಅನುದಾನ ಮಂಜೂರಾಗಿದ್ದು, ಕಾಮಗಾರಿಯ ಉದ್ಘಾಟನೆಯನ್ನು ಮಾಜಿ ಸಚಿವರಾದ ಶ್ರೀ ಬಿ. ರಮಾನಾಥ ರೈ ಅವರು ನೆರವೇರಿಸಿದರು.
ಗ್ರಾಮದ ಜನರ ಬಹುಕಾಲದ ಬೇಡಿಕೆಗೆ ಸ್ಪಂದಿಸಿ ಈ ರಸ್ತೆ ಅಭಿವೃದ್ಧಿಗಾಗಿ ವಿಶೇಷ ಅನುದಾನ ಮಂಜೂರು ಮಾಡಿಸಿರುವುದು ಗ್ರಾಮಸ್ಥರಲ್ಲಿ ಸಂತಸ ಮೂಡಿಸಿದೆ. ಈ ಅನುದಾನವನ್ನು ಮಂಜೂರು ಮಾಡುವಲ್ಲಿ ಉಸ್ತುವಾರಿ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ಅವರು ವಿಶೇಷ ಆಸಕ್ತಿ ವಹಿಸಿದ್ದು, ಅನುದಾನ ಮಂಜೂರಾತಿಗೆ ಮಾಜಿ ಸಚಿವರಾದ ಶ್ರೀ ಬಿ. ರಮಾನಾಥ ರೈ ಅವರು ಸಹಕಾರ ನೀಡಿದ್ದರು.
ಅರ್ಭಿ–ದೆಂಬುಡೆ ರಸ್ತೆ ಕಾಂಕ್ರೀಟೀಕರಣದಿಂದ ಸ್ಥಳೀಯ ನಿವಾಸಿಗಳಿಗೆ ಸುಗಮ ಸಂಚಾರಕ್ಕೆ ಅನುಕೂಲವಾಗಲಿದ್ದು, ಗ್ರಾಮೀಣ ಪ್ರದೇಶದ ಮೂಲಸೌಕರ್ಯ ಅಭಿವೃದ್ಧಿಗೆ ಇದು ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ.
ಉದ್ಘಾಟನಾ ಕಾರ್ಯಕ್ರಮದಲ್ಲಿ ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಬೇಬಿ ಕುಂದರ್,ಗ್ರಾಮಪಂಚಾಯತ್ ಸದಸ್ಯರು ದೇಜಪ್ಪ ಪೂಜಾರಿ, ನಳಿನಿ ನಾಯ್ಕ್, ಜಗದೀಶ್ ಕೊಯಿಲ,ಎಂ ಬಿ ಅಶ್ರಫ್,ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ ಆರ್ ಅಂಚನ್, ಅರಳ ವಲಯ ಅಧ್ಯಕ್ಷರಾದ ಲತೀಫ್ ಸುಂಟಿಹಿಟ್ಲು, ಅಶ್ರಫ್ ಕುಟ್ಟಿಕಲ, ಸಂತೋಷ್ ಪಿಂಟೋ,ಸುರೇಶ್ ಜೋರ, ಅಶ್ರಫ್ ಮುಲ್ಲರಪಟ್ಟಣ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.



























