ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಿ.ಕೆ.ಹರಿಪ್ರಸಾದ್ ಅವರನ್ನು ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ವತಿಯಿಂದ ಬೆಂಗಳೂರಿನಲ್ಲಿ ಜೂ.21ರಂದು ಭೇಟಿ ಮಾಡಿ ಗೌರವಿಸಿ, ಶುಭಾಶಯ ಕೋರಲಾಯಿತು.
ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ, ಗೆಜ್ಜೆಗಿರಿ ಕ್ಷೇತ್ರದ ಗೌರವಾಧ್ಯಕ್ಷ ಪಿತಾಂಬರ ಹೇರಾಜೆ, ಪುತ್ತೂರು ಬಿಲ್ಲವ ಸಂಘದ ಉಪಾಧ್ಯಕ್ಷ ಚಿದಾನಂದ ಸುವರ್ಣ, ಕಾರ್ಯದರ್ಶಿ ಬಿ.ಟಿ. ಮಹೇಶ್ಚಂದ್ರ ಸಾಲಿಯಾನ್ ನಡುಬೈಲುಗುತ್ತು, ಕೋಶಾಧಿಕಾರಿ ಜನಾರ್ದನ ಪೂಜಾರಿ ಪದ್ದಡ್ಕ ಮೊದಲಾದವರು ಉಪಸ್ಥಿತರಿದ್ದರು.



























