Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಬೈಕ್ ಕಳ್ಳತನ ಪ್ರಕರಣ: ಆರೋಪಿ ಸೆರೆ…!!!

    ಉಪ್ಪಿನಂಗಡಿ: ಬೈಕ್ ಕಳ್ಳತನ ಪ್ರಕರಣ: ಆರೋಪಿ ಸೆರೆ…!!!

    ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಬೃಹತ್ ಪ್ರತಿಭಟನೆ..!!

    ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಬೃಹತ್ ಪ್ರತಿಭಟನೆ..!!

    ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಪಿಕಪ್ ವಾಹನ..!!!

    ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಪಿಕಪ್ ವಾಹನ..!!!

    (ಜೂ.29): ಅಟ್ಲಾಸ್ ವುಡನ್ ಡೋರ್ಸ್, ವಿಂಡೋಸ್ ಮತ್ತು ಹಾರ್ಡ್‌ವೇರ್ ನೂತನ ಶೋರೂಂ ಉದ್ಘಾಟನೆ..!!

    (ಜೂ.29): ಅಟ್ಲಾಸ್ ವುಡನ್ ಡೋರ್ಸ್, ವಿಂಡೋಸ್ ಮತ್ತು ಹಾರ್ಡ್‌ವೇರ್ ನೂತನ ಶೋರೂಂ ಉದ್ಘಾಟನೆ..!!

    ರೀಲ್ಸ್‌ನಲ್ಲಿ ಗರಿಬಿಚ್ಚಿದ ನವಿಲು : ಕಿಶನ್‌, ನಿವೇದಿತ  ವಿರುದ್ಧ ದೂರು ದಾಖಲು…!!!

    ರೀಲ್ಸ್‌ನಲ್ಲಿ ಗರಿಬಿಚ್ಚಿದ ನವಿಲು : ಕಿಶನ್‌, ನಿವೇದಿತ ವಿರುದ್ಧ ದೂರು ದಾಖಲು…!!!

    ಪ್ರಿಯಕರನ ಜೊತೆ ಸೇರಿ ತಂದೆ, ತಾಯಿ, ತಂಗಿಯನ್ನೇ ಕೊಂದ ಮಗಳು..!

    ಪ್ರಿಯಕರನ ಜೊತೆ ಸೇರಿ ತಂದೆ, ತಾಯಿ, ತಂಗಿಯನ್ನೇ ಕೊಂದ ಮಗಳು..!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result

Home ನ್ಯೂಸ್ ಬಂಟ್ವಾಳ

ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಬೃಹತ್ ಪ್ರತಿಭಟನೆ..!!

June 24, 2026
in ಬಂಟ್ವಾಳ
0
ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಬೃಹತ್ ಪ್ರತಿಭಟನೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ವಿಟ್ಲ : ಪೆರುವಾಯಿ ಗ್ರಾಮದ ಜನರ ಜೀವಕ್ಕೆ ಸಂಚಕಾರ ತಂದೊಡ್ಡಿರುವ ಕಿರಿದಾದ ರಸ್ತೆ ಮತ್ತು ಹಳೆಯ ಸೇತುವೆಗಳ ಜಾಗದಲ್ಲಿ ಹೊಸ ಸೇತುವೆ ನಿರ್ಮಿಸುವಂತೆ ಹಾಗೂ ರಸ್ತೆಯನ್ನು ಪಿ.ಡಬ್ಲ್ಯೂ.ಡಿ (PWD) ಇಲಾಖೆಗೆ ಹಸ್ತಾಂತರಿಸುವಂತೆ ಆಗ್ರಹಿಸಿ ಜೂನ್ 22 ಪೆರುವಾಯಿ ಜಂಕ್ಷನ್‌ನಲ್ಲಿ ಸಾರ್ವಜನಿಕರು ಮತ್ತು ಪ್ರತಿಭಟನಾ ಸಮಿತಿಯ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.

Advertisement
Advertisement
Advertisement

ಪೆರುವಾಯಿ ಜಂಕ್ಷನ್‌ನಿಂದ ಕೇವಲ 500 ಮೀಟರ್ ದೂರದಲ್ಲಿರುವ ಪೇರಡ್ಕದ ಕರ್ನಾಟಕ-ಕೇರಳ ಸಂಪರ್ಕ ಸೇತುವೆ ಮತ್ತು 150 ಮೀಟರ್ ದೂರದಲ್ಲಿರುವ ಪೆರುವಾಯಿ-ಮಾಣಿಲ ರಸ್ತೆಯ ಸೇತುವೆಗಳು ಹಲವು ದಶಕಗಳಷ್ಟು ಹಳೆಯದಾಗಿವೆ. ಇವು ತೀರಾ ಕಿರಿದಾಗಿದ್ದು, ಪ್ರತಿದಿನ ನೂರಾರು ವಾಹನಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಜೀವಭಯದಲ್ಲೇ ಸಂಚರಿಸುವ ಪರಿಸ್ಥಿತಿ ಇದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಹತ್ತಕ್ಕೂ ಹೆಚ್ಚು ಅಪಘಾತಗಳು:
ವಿಶೇಷವಾಗಿ ಮಳೆಗಾಲದಲ್ಲಿ ಪೇರಡ್ಕ ಸೇತುವೆಯ ಮೇಲಿಂದ ನೀರು ಹರಿಯುತ್ತಿದ್ದು, ಸಂಚಾರ ಸಂಪೂರ್ಣ ಅಪಾಯಕಾರಿಯಾಗುತ್ತದೆ. ಸೇತುವೆಗೆ ಯಾವುದೇ ತಡೆಗೋಡೆ ಇಲ್ಲದ ಕಾರಣ ಕಳೆದ ಹತ್ತು ದಿನಗಳಲ್ಲೇ ಕೋಳಿ ಸಾಗಾಟದ ವಾಹನ ಮತ್ತು ಆಲ್ಟೋ ಕಾರೊಂದು ಸೇತುವೆಯಿಂದ ಕೆಳಗೆ ಬಿದ್ದಿವೆ. ಕಳೆದ ಕೆಲವು ವರ್ಷಗಳಲ್ಲಿ ಹತ್ತಕ್ಕೂ ಹೆಚ್ಚು ವಾಹನಗಳು ಇಲ್ಲಿ ಅಪಘಾತಕ್ಕೀಡಾಗಿವೆ ಎಂದು ಗ್ರಾಮಸ್ಥರು ದೂರಿದ್ದಾರೆ.

Advertisement

ಪ್ರಮುಖ ಬೇಡಿಕೆಗಳು:ಪೆರುವಾಯಿ ಗ್ರಾಮದ ಪೇರಡ್ಕದಲ್ಲಿರುವ ಕರ್ನಾಟಕ-ಕೇರಳ ಸಂಪರ್ಕ ಸೇತುವೆಯ ಸ್ಥಳದಲ್ಲಿ ಅಪಾಯಕಾರಿ ತಿರುವುಗಳನ್ನು ತೆರವುಗೊಳಿಸಿ, ಸುಧಾರಿತ ರಸ್ತೆ ವಿನ್ಯಾಸದೊಂದಿಗೆ ವಿಶಾಲ ಹಾಗೂ ಸುರಕ್ಷಿತ ನೂತನ ಸೇತುವೆ ನಿರ್ಮಿಸಬೇಕು.

ಪೆರುವಾಯಿ-ಮಾಣಿಲ ಸಂಪರ್ಕ ಸೇತುವೆಯು ಹಳೆಯದಾಗಿ ಹಾಗೂ ಕಿರಿದಾಗಿರುವುದರಿಂದ ಅದನ್ನು ತೆರವುಗೊಳಿಸಿ ಆಧುನಿಕ ವಿನ್ಯಾಸದೊಂದಿಗೆ ವಿಶಾಲ ಮತ್ತು ಸುರಕ್ಷಿತ ನೂತನ ಸೇತುವೆಯಾಗಿ ಪುನರ್ ನಿರ್ಮಿಸಬೇಕು.

ಪೆರುವಾಯಿಯಿಂದ ಬಾಳಶೆಟ್ಟಿ ಮೂಲೆ ಮೂಲಕ ಹಾದುಹೋಗುವ ಕನ್ಯಾನ ತನಕದ ರಸ್ತೆಯನ್ನು ಲೋಕೋಪಯೋಗಿ ಇಲಾಖೆ (PWD) ವ್ಯಾಪ್ತಿಗೆ ಹಸ್ತಾಂತರಿಸಿ ರಸ್ತೆ ಅಗಲೀಕರಣ ಹಾಗೂ ಸಮಗ್ರ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕು.

ಓಣಿಬಾಗಿಲುವಿನಿಂದ ಪಕಳಕುಂಜ ತನಕ ಇನ್ನೂ ಅಗಲೀಕರಣವಾಗದೆ ಉಳಿದಿರುವ ರಸ್ತೆಯನ್ನು ತಕ್ಷಣ ಅಗಲೀಕರಿಸಿ ಅಭಿವೃದ್ಧಿಪಡಿಸಬೇಕು.

ಹೊಸ ಸೇತುವೆ ನಿರ್ಮಾಣವಾಗುವವರೆಗೆ ಎರಡೂ ಸೇತುವೆಗಳಲ್ಲಿ ಅಗತ್ಯ ಸುರಕ್ಷ ತಾ ಕ್ರಮಗಳು, ಎಚ್ಚರಿಕೆ ಸೂಚನಾ ಫಲಕಗಳು, ಪ್ರತಿಫಲಕ, ಭದ್ರತಾ ತಡೆಗೋಡೆಗಳು ಹಾಗೂ ಇತರೆ ಸುರಕ್ಷತಾ ವ್ಯವಸ್ಥೆಗಳನ್ನು ತುರ್ತಾಗಿ ಅಳವಡಿಸಬೇಕು.

ಮೇಲ್ಕಂಡ ಎಲ್ಲಾ ಕಾಮಗಾರಿಗಳಿಗೆ ಸ್ಪಷ್ಟ ಕಾರ್ಯಯೋಜನೆ ರೂಪಿಸಿ, ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವ ಬಗ್ಗೆ ಸಾರ್ವಜನಿಕರಿಗೆ ಭರವಸೆ ಮತ್ತು ಮಾಹಿತಿ ನೀಡಬೇಕು.

ಸಾರ್ವಜನಿಕರ ಜೀವ ಮತ್ತು ಸುರಕ್ಷತೆಯ ವಿಚಾರದಲ್ಲಿ ಯಾವುದೇ ದುರಂತ ಸಂಭವಿಸುವ ಮೊದಲು ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಗಳು ಅಗತ್ಯ ಕ್ರಮ ಕೈಗೊಳ್ಳುವುದು ಅತ್ಯಗತ್ಯವಾಗಿದೆ. ಆದ್ದರಿಂದ ಈ ಮನವಿಯನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಬೇಕು.

ಅಧಿಕಾರಿಗಳಿಗೆ ಮತ್ತು ಜನಪ್ರತಿನಿಧಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಇಂದು ರಸ್ತೆಗಿಳಿದು ಪ್ರತಿಭಟನೆ ನಡೆಸಲಾಗುತ್ತಿದ್ದು, ಪ್ರತಿಭಟನೆಯ ತೀವ್ರತೆ ಅರಿತು ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಪಂಚಾಯತ್ ಬಂಟ್ವಾಳ ವಿಭಾಗದ ಇಂಜಿನಿಯರ್ ತಾರಾನಾಥ್ ಮತ್ತು ಮಂಗಳೂರು ವಿಭಾಗದ ಇಂಜಿನಿಯರ್ ವೇಣುಗೋಪಾಲ್ ಅವರನ್ನು ಪ್ರತಿಭಟನಾಕಾರರು ಮುತ್ತಿಗೆ ಹಾಕಿ, ತೀವ್ರ ತರಾಟೆಗೆ ತೆಗೆದುಕೊಂಡರು. ಕೆಲ ದಿನಗಳ ಹಿಂದೆ ನೀಡಿದ್ದ ಗಡುವಿಗೆ ಕೇವಲ ಒಂದು ಲೋಡ್ ಕೆಂಪು ಕಲ್ಲುಗಳನ್ನು ತಂದು ಸುರಿದಿರುವುದಕ್ಕೆ ಪ್ರತಿಭಟನೆಯ ನೇತೃತ್ವ ವಹಿಸಿದ ಸಾಮಾಜಿಕ ಕಾರ್ಯಕರ್ತ ಯತೀಶ್ ಪೆರುವಾಯಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. “ಇದು ಸುರಕ್ಷತಾ ಕ್ರಮವಲ್ಲ, ಜನರ ಕಣ್ಣಿಗೆ ಮಣ್ಣೆರಚುವ ತಂತ್ರ” ಎಂದು ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಪ್ರತಿಭಟನಾಕಾರರ ತೀವ್ರ ಪ್ರತಿರೋಧದ ಬಳಿಕ ಮಾತನಾಡಿದ ಜಿಲ್ಲಾ ಪಂಚಾಯತ್ ಮತ್ತು ಪಂಚಾಯತ್ ರಾಜ್ ಇಲಾಖೆಯ ಇಂಜಿನಿಯರ್ ವೇಣುಗೋಪಾಲ್, ಅಗತ್ಯ ಸುರಕ್ಷಾ ಕ್ರಮದ ಭಾಗವಾಗಿ ನಾಳೆಯಿಂದಲೇ ಕೆಲಸ ಪ್ರಾರಂಭಿಸಿ ಒಂದು ವಾರದಲ್ಲಿ ತಡೆಬೇಲಿ ಹಾಗೂ ಎಚ್ಚರಿಕೆ ಫಲಕಗಳನ್ನು ಅಳವಡಿಸ ಲಾಗುವುದು. 15 ದಿನಗಳ ಒಳಗಾಗಿ ತಡೆಗೋಡೆ ಕಾಮಗಾರಿಯನ್ನು ಮುಗಿಸುತ್ತೇವೆ ” ಎಂದು ಭರವಸೆ ನೀಡಿದರು. ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಅವಿನಾಶ್ ಮಾತನಾಡಿ, ಈಗಾಗಲೇ ಹೊಸ ಸೇತುವೆಯ ನಿರ್ಮಾಣಕ್ಕೆ ಹಾಗೂ ಗ್ರಾಮೀಣ ರಸ್ತೆಗಳನ್ನು ಮೇಲ್ದರ್ಜೆಗೇರಿಸುವ ಈ ಹಿಂದೆ ನೀವು ನೀಡಿದ ಮನವಿಗೆ ಸಂಬಂಧಿಸಿದಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮುಂದಿನ ಹಂತದಲ್ಲಿ ಮಂಜೂರಾತಿ ದೊರೆತ ತಕ್ಷಣ ಹೊಸ ಸೇತುವೆ ನಿರ್ಮಾಣ ಮಾಡಲಾಗುವುದು ಎಂದರು.

ಪ್ರತಿಭಟನೆಗೆ ಧ್ವನಿಗೂಡಿಸಿ ಗೋಪಾಲಕೃಷ್ಣ ಶೆಟ್ಟಿ ಸೇನೆರಪಾಲು,ಎಂ ಮಹಾಬಲ ಭಟ್ ಮುರುವ ,ಗಣೇಶ್ ಭಟ್ ದೇಲಂತಮಜಲು, ರಾಘವ ಮಾಸ್ಟರ್ ಬೆರಿಪದವು ಮಾತನಾಡಿದರು.

ಪ್ರತಿಭಟನೆಯ ಉದ್ದೇಶ, ಬೇಡಿಕೆಗಳು ಹಾಗೂ ಹೋರಾಟದ ಹಿನ್ನೆಲೆಯ ಕುರಿತು ಸಾಮಾಜಿಕ ಕಾರ್ಯಕರ್ತ ಯತೀಶ್ ಪೆರುವಾಯಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಪ್ರಮುಖರಾದ ಜಯರಾಮ ಆಳ್ವ ಬದಿಯಾರುರವರು ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.ಸಂಘಟಕರಾದ ಮೋಕ್ಷಿತ್ ಪೆರುವಾಯಿ ವಂದಿಸಿದರು.

ಪ್ರತಿಭಟನಾ ಸಭೆಯಲ್ಲಿ ಪ್ರಮುಖರಾದ, ಗೋಪಾಲಕೃಷ್ಣ ಶೆಟ್ಟಿ ಸೇನೆರಪಾಲು,ವಿನೀತ್ ಶೆಟ್ಟಿ ಕಾನ,ಪ್ರಭಾಕರ ಶೆಟ್ಟಿ ಕಳಾಯ್ತಿಮಾರ್,ಅಶೋಕ್ ಶೆಟ್ಟಿ ಮಾಣಿಲ, ವಿಷ್ಣು ಭಟ್ ಕನ್ನಡಗುಳಿ,ಪ್ರಕಾಶ್ಚಂದ್ರ ಶೆಟ್ಟಿ ಎ.ಕೆ ನಿಲಯ,ರಾಘವ ಮಾಸ್ಟರ್ ಬೆರಿಪದವು,ಗಿರೀಶ್ ಪಾಟಾಳಿ ಕೊಲ್ಲತ್ತಡ್ಕ ,ಹೇಮಂತ್ ಪಾಟಾಳಿ ಕೊಲ್ಲತ್ತಡ್ಕ,ಮನೋಜ್ ಆಚಾರ್ಯ ಪೆರುವಾಯಿ,ಗಣೇಶ್ ರೈ ಅಡಿವಾಯಿ, ಪಿ.ಕೆ ಶ್ರೀಧರ್ ಕುಕ್ಕಾಜೆ,ಸವಿತಾ ಆಚಾರ್ಯ ಅಶ್ವಥನಗರ, ಸೂರ್ಯ ಪ್ರಭಾ ಎ.ಕೆ ನಿಲಯ ಹಾಗೂ ಪೆರುವಾಯಿ ಗ್ರಾಮದ ನೂರಾರು ಸಾರ್ವಜನಿಕರು, ಸಾಮಾಜಿಕ ಕಾರ್ಯಕರ್ತರು,ಕೃಷಿಕರು, ವ್ಯಾಪಾರಸ್ಥರು ಮತ್ತು ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು.

Previous Post

ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಪಿಕಪ್ ವಾಹನ..!!!

Next Post

ಉಪ್ಪಿನಂಗಡಿ: ಬೈಕ್ ಕಳ್ಳತನ ಪ್ರಕರಣ: ಆರೋಪಿ ಸೆರೆ…!!!

OtherNews

ಪ್ರಾಮಾಣಿಕತೆ ಮೆರೆದ ಪಟ್ಟಣ ಪಂಚಾಯತ್ ತ್ಯಾಜ್ಯ ಘಟಕದ ವಾಹನ ಚಾಲಕ ಅರುಣ್ ಸಾಲ್ಯಾನ್..!!
ಬಂಟ್ವಾಳ

ಪ್ರಾಮಾಣಿಕತೆ ಮೆರೆದ ಪಟ್ಟಣ ಪಂಚಾಯತ್ ತ್ಯಾಜ್ಯ ಘಟಕದ ವಾಹನ ಚಾಲಕ ಅರುಣ್ ಸಾಲ್ಯಾನ್..!!

June 23, 2026
ಅರ್ಭಿ – ದೆಂಬುಡೆ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಚಾಲನೆ..!!
ಬಂಟ್ವಾಳ

ಅರ್ಭಿ – ದೆಂಬುಡೆ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಚಾಲನೆ..!!

June 23, 2026
ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿದ್ ಯೋಧ ’ ಕಾರ್ಯಕ್ರಮ : ಜೂ.21ರಂದು ಕಾರಿಂಜೇಶ್ವರ ಬೆಟ್ಟದಲ್ಲಿ ಬೃಹತ್‌ ಯೋಗಾಭ್ಯಾಸ: ಸಂಸದ ಕ್ಯಾ.ಚೌಟ..!!
ಬಂಟ್ವಾಳ

ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ’ಯೋಗ ವಿದ್ ಯೋಧ ’ ಕಾರ್ಯಕ್ರಮ : ಜೂ.21ರಂದು ಕಾರಿಂಜೇಶ್ವರ ಬೆಟ್ಟದಲ್ಲಿ ಬೃಹತ್‌ ಯೋಗಾಭ್ಯಾಸ: ಸಂಸದ ಕ್ಯಾ.ಚೌಟ..!!

June 20, 2026
ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!
ಬಂಟ್ವಾಳ

ಬುರ್ದುವರೆಗೆ ಸಂಚರಿಸಲಿದೆ ಕೆಎಸ್‌ಆರ್‌ಟಿಸಿ ಬಸ್‌..!!

June 19, 2026
ವಿಟ್ಲದಲ್ಲಿ ಭೀಕರ ಅಪಘಾತ: ಟಿಪ್ಪರ್ ಲಾರಿ ಚಕ್ರದಡಿ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು..!
Featured

ವಿಟ್ಲದಲ್ಲಿ ಭೀಕರ ಅಪಘಾತ: ಟಿಪ್ಪರ್ ಲಾರಿ ಚಕ್ರದಡಿ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು..!

June 18, 2026
ಪೆರುವಾಯಿ: ಸೇತುವೆಗಳ ದುರವಸ್ಥೆ : ನೂತನ ಸೇತುವೆ ನಿರ್ಮಾಣಕ್ಕೆ ಆಗ್ರಹ :ಜೂನ್ 22ಕ್ಕೆ ರಸ್ತೆ ತಡೆ ಪ್ರತಿಭಟನೆ ಎಚ್ಚರಿಕೆ…!!
ಕ್ರೈಮ್

ಪೆರುವಾಯಿ: ಸೇತುವೆಗಳ ದುರವಸ್ಥೆ : ನೂತನ ಸೇತುವೆ ನಿರ್ಮಾಣಕ್ಕೆ ಆಗ್ರಹ :ಜೂನ್ 22ಕ್ಕೆ ರಸ್ತೆ ತಡೆ ಪ್ರತಿಭಟನೆ ಎಚ್ಚರಿಕೆ…!!

June 17, 2026

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ: ಬೈಕ್ ಕಳ್ಳತನ ಪ್ರಕರಣ: ಆರೋಪಿ ಸೆರೆ…!!!

ಉಪ್ಪಿನಂಗಡಿ: ಬೈಕ್ ಕಳ್ಳತನ ಪ್ರಕರಣ: ಆರೋಪಿ ಸೆರೆ…!!!

June 24, 2026
ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಬೃಹತ್ ಪ್ರತಿಭಟನೆ..!!

ಪೆರುವಾಯಿ ಜಂಕ್ಷನ್‌ನಲ್ಲಿ ನೂತನ ಸೇತುವೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಸಾರ್ವಜನಿಕರ ಬೃಹತ್ ಪ್ರತಿಭಟನೆ..!!

June 24, 2026
ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಪಿಕಪ್ ವಾಹನ..!!!

ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಪಿಕಪ್ ವಾಹನ..!!!

June 24, 2026
(ಜೂ.29): ಅಟ್ಲಾಸ್ ವುಡನ್ ಡೋರ್ಸ್, ವಿಂಡೋಸ್ ಮತ್ತು ಹಾರ್ಡ್‌ವೇರ್ ನೂತನ ಶೋರೂಂ ಉದ್ಘಾಟನೆ..!!

(ಜೂ.29): ಅಟ್ಲಾಸ್ ವುಡನ್ ಡೋರ್ಸ್, ವಿಂಡೋಸ್ ಮತ್ತು ಹಾರ್ಡ್‌ವೇರ್ ನೂತನ ಶೋರೂಂ ಉದ್ಘಾಟನೆ..!!

June 23, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

You cannot copy content of this page

No Result
View All Result

© 2020 Zoomin TV. All Rights Reserved. Website made with ❤️ by The Web People.