ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 98/2023ಕ್ಕೆ ಸಂಬಂಧಿಸಿದಂತೆ, ಬಂಟ್ವಾಳದ ಮಾನ್ಯ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಸಿ.ಸಿ. ನಂ. 440/2024 ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಮೊಹಮ್ಮದ್ ಫರಾಜ್ (2) (ತಂದೆ: ಮೊಹಮ್ಮದ್ ಆಯುಬ್) ಎಂದು ಗುರುತಿಸಲಾಗಿದೆ. ಇವರು ಮೂಲತಃ ಮಂಗಳೂರು ತಾಲೂಕಿನ ಕಸಬಾ ಬೆಂಗ್ರೆ ಗ್ರಾಮದ ಬೆಂಗ್ರೆ ನಿವಾಸಿಯಾಗಿದ್ದು, ಪ್ರಸ್ತುತ ಕಾಟಿಪಳ್ಳ 2ನೇ ಬ್ಲಾಕ್‌ನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.
ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರ ಮಾರ್ಗದರ್ಶನದಲ್ಲಿ, ಎಎಸ್‌ಐ ಸುಜು, ಸಿಎಚ್‌ಸಿ 665 ಜಗದೀಶ್ ಹಾಗೂ ಪಿಸಿ 2511 ಮಂಜುನಾಥ್ ಅವರ ತಂಡವು ಜೂನ್ 23, 2026ರಂದು ಮಂಗಳೂರಿನಲ್ಲಿ ಆರೋಪಿಯನ್ನು ಬಂಧಿಸಿತು.
ಬಂಧಿತನನ್ನು ಈ ದಿನ ಪಿಸಿ 2471 ವಿಜಯ ಹಾಗೂ ಪಿಸಿ 611 ರಂಜಿತ್ ಅವರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಇದಲ್ಲದೆ, ಆರೋಪಿಯ ವಿರುದ್ಧ ಮಂಗಳೂರು ನಗರದ ಪಣಂಬೂರು ಪೊಲೀಸ್ ಠಾಣೆ, ಬಜ್ಪೆ ಪೊಲೀಸ್ ಠಾಣೆ ಹಾಗೂ ಉಡುಪಿ ನಗರ ಪೊಲೀಸ್ ಠಾಣೆಗಳಲ್ಲಿ ವಿವಿಧ ಪ್ರಕರಣಗಳು ದಾಖಲಾಗಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.



























