ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಸುಕ್ಕೇರಿ ಗ್ರಾಮದಲ್ಲಿ ಶುಕ್ರವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಸುಕ್ಕೇರಿ ಗ್ರಾಮದ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬಿಳಿ ಬಣ್ಣದ ಮಾರುತಿ ಸುಜುಕಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಂಕ್ರೀಟ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ಮುರಿದು ಕಾರಿನ ಮೇಲೆಯೇ ಬಿದ್ದಿದ್ದು, ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಬಾನೆಟ್, ಬಂಪರ್ ಹಾಗೂ ಇಂಜಿನ್ ಭಾಗ ತೀವ್ರವಾಗಿ ಹಾನಿಗೊಳಗಾಗಿದೆ.
ಘಟನೆಯ ಪರಿಣಾಮ ವಿದ್ಯುತ್ ತಂತಿಗಳು ತುಂಡಾಗಿ ರಸ್ತೆಯ ಮೇಲೆ ಬಿದ್ದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳದ ವಿದ್ಯುತ್ ಸಂಪರ್ಕವನ್ನು ಸ್ಥಗಿತಗೊಳಿಸಲಾಗಿದೆ. ಮೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ದುರಸ್ತಿ ಕಾರ್ಯದಲ್ಲಿ ತೊಡಗಿದ್ದಾರೆ.ಅಪಘಾತದಲ್ಲಿ ಯಾರಾದರೂ ಗಾಯಗೊಂಡಿರುವ ಕುರಿತು ಪೊಲೀಸರಿಂದ ಅಧಿಕೃತ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.



























