ದಾವಣಗೆರೆ: ಕಂಠಪೂರ್ತಿ ಕುಡಿದು ಪ್ರತಿಷ್ಠಿತ ಕುಟುಂಬಕ್ಕೆ ಸೇರಿದ ಯುವತಿಯೊಬ್ಬಳು ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಿದ ಘಟನೆ ದಾವಣಗೆರೆ ನಗರದ ಶಾಮನೂರು ರಸ್ತೆಯಲ್ಲಿ ನಡೆದಿದೆ.
ಓವರ್ ಡ್ರಿಂಕ್ ಮಾಡಿ ಯುವತಿ ಥಾರ್ ಕಾರನ್ನು ಅಡ್ಡಾದಿಡ್ಡಿ ಚಲಾಯಿಸುತ್ತಿದ್ದಳು. ಈ ವೇಳೆ ಡ್ರಿಂಕ್ & ಡ್ರೈವ್ ತಪಾಸಣೆ ಮಾಡುತ್ತಿದ್ದ ಪೊಲೀಸರು, ಕಾರನ್ನು ತಡೆದಿದ್ದಾರೆ. ಇದರಿಂದ ಸಿಟ್ಟಿಗೆದ್ದ ಯುವತಿ, ಮಹಿಳಾ ಪಿಎಸ್‌ಐಗೆ ಕಾಲಿನಿಂದ ಒದ್ದು, ಹಲ್ಲೆ ಮಾಡಿದ್ದಾಳೆ.
ಯುವತಿ ರಂಪಾಟ ಮಾಡಿದ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಆಕೆಯ ವಿರುದ್ಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


























