ಪುತ್ತೂರು, ಜೂನ್ 27: ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಅಧಿಕೃತ ಲೋಗೋವನ್ನು ದುರುಪಯೋಗಪಡಿಸಿಕೊಂಡು, ಟ್ರಸ್ಟ್‌ನ ಸಂಚಾಲಕರಾದ ಅರುಣ್ ಕುಮಾರ್ ಪುತ್ತಿಲ ಅವರ ಕುರಿತು ಫೇಸ್‌ಬುಕ್‌ನಲ್ಲಿ ಮಾನಹಾನಿಕರ ಹಾಗೂ ಸುಳ್ಳು ಮಾಹಿತಿ ಹಂಚಲಾಗಿದೆ ಎಂದು ಆರೋಪಿಸಿ ಇಬ್ಬರು ವ್ಯಕ್ತಿಗಳ ವಿರುದ್ಧ ಸಂಬಂಧಿತ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ದೂರಿನಲ್ಲಿ, ಟ್ರಸ್ಟ್‌ನ ಹೆಸರು ಮತ್ತು ಅಧಿಕೃತ ಲೋಗೋವನ್ನು ಅನುಮತಿಯಿಲ್ಲದೆ ಬಳಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ತಪ್ಪು ಮಾಹಿತಿ ಹರಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಮನವಿ ಸಲ್ಲಿಸಲಾಗಿದೆ.
ದೂರು ಸಲ್ಲಿಸುವ ಸಂದರ್ಭದಲ್ಲಿ ಟ್ರಸ್ಟ್‌ನ ಅಧ್ಯಕ್ಷರಾದ ಶ್ರೀರಾಮ ಭಟ್, ಸಂಘಟನಾ ಕಾರ್ಯದರ್ಶಿ ಅನಿಲ್ ತೆಂಕಿಲ, ಕೋಶಾಧಿಕಾರಿ ರೂಪೇಶ್ ನಾಯಕ್ ಹಾಗೂ ಮಾಜಿ ಅಧ್ಯಕ್ಷರಾದ ಮಹೇಂದ್ರ ವರ್ಮ ಉಪಸ್ಥಿತರಿದ್ದರು.



























