ವಿಟ್ಲ–ಸಾಲೆತ್ತೂರು ರಸ್ತೆಯ ಕೊಡಂಗಾಯಿ ಕಾಪುಮಜಲು ಬಳಿ ಇಂದು ಬೆಳಿಗ್ಗೆ ಎರ್ಟಿಗಾ ಕಾರು ಮತ್ತು ಹೋಂಡಾ ಡಿಯೋ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯರು ಅವರನ್ನು ಅಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಎರ್ಟಿಗಾ ಕಾರು ಚಾಲಕ ರಸ್ತೆ ತಪ್ಪು ಬದಿಯಲ್ಲಿ ಚಲಿಸಿದ್ದರಿಂದ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ರಸ್ತೆ ಬದಿಯ ಚರಂಡಿಗೆ ಇಳಿದಿದ್ದು, ಸ್ಕೂಟರ್ ಸಂಪೂರ್ಣ ಜಖಂಗೊಂಡಿದೆ.


























