ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ಪುತ್ತೂರು ನಗರಸಭೆ ವ್ಯಾಪ್ತಿಯ 16 ಸಾವಿರ ಮನೆಗಳಿಗೆ ಬಿಲ್ವಪತ್ರೆ ನೀಡುವ ಅಭಿಯಾನಕ್ಕೆ ಜೂ.28ರಂದು ಚಾಲನೆ ನೀಡಲಾಯಿತು.
ನಗರಸಭೆ ಅಧ್ಯಕ್ಷ ಕೆ ಜೀವಂಧರ್ ಜೈನ್, ಶ್ರೀಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್, ಮಾಜಿ ಆಡಳಿತ ಮೊಕ್ತೇಸರ ಎನ್ ಕೆ ಜಗನ್ನಿವಾಸ ರಾವ್ ನಗರಸಭೆ ವಾರ್ಡ್ ಸದಸ್ಯರಿಗೆ ಬಿಲ್ವಪತ್ರೆ ಗಿಡಗಳನ್ನು ವಿತರಿಸಿದರು.
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧಕ್ಷ ಕೇಶವಪ್ರಸಾದ್ ಮುಳಿಯ ಅವರು ಮಾತನಾಡಿ ಶಿವನಿಗೆ ಪ್ರಿಯವಾದ ಬಿಲ್ವಪತ್ರೆಗೆ ಬಹಳ ಮಹತ್ವವಿದೆ. ಪುತ್ತೂರಿನ ಪ್ರತಿ ಮನೆಯಲ್ಲೂ ಬಿಲ್ವಪತ್ರೆ ಗಿಡ ಬೆಳೆಸುವ ಗುರಿ ಇದೆ. ಈ ನಿಟ್ಟಿನಲ್ಲಿ ನಗರಸಭೆ ವ್ಯಾಪ್ತಿಯಲ್ಲಿರುವ 16ಸಾವಿರ ಮನೆಗಳಿಗೂ ಬಿಲ್ವಪತ್ರೆ ಗಿಡ ವಿತರಣೆ ಮಾಡುವ ಯೋಜನೆಗೆ ಸಂಬಂಧಿಸಿ ಪ್ರಥಮ ಹಂತದಲ್ಲಿ 2ಸಾವಿರ ಗಿಡಗಳನ್ನು ವಿತರಣೆ ಮಾಡಲಿದ್ದೇವೆ. ಅದನ್ನು ಆಯಾ ವಾರ್ಡ್‌ನ ನಗರಸಭಾ ಸದಸ್ಯರು ನಾಗರಿಕಗೆ ವಿತರಣೆ ಮಾಡಲಿದ್ದಾರೆ ಎಂದರು. ನಗರಸಭೆ ಸ್ಥಳೀಯ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್, ದೇವಳದ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರಧಾನ ಅರ್ಚಕ ವಿ.ಎಸ್ ಭಟ್ ಪ್ರಾರ್ಥಿಸಿದರು. ವ್ಯವಸ್ಥಾಪನಾ ಸಮಿತಿ ಸದಸ್ಯ ರಾಮದಾಸ ಗೌಡ ಸ್ವಾಗತಿಸಿದರು. ಡಾ.ಸುಧಾ ಎಸ್ ರಾವ್ ಕಾರ್ಯಕ್ರಮ ನಿರೂಪಿಸಿದರು. ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಬಿ ಐತ್ತಪ್ಪ ನಾಯ್ಕ್ ವಂದಿಸಿದರು. ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರಾಮ್ ದಾಸ್ ಗೌಡ, ವೀಣಾ ಬಿ ಕೆ, ರವೀಂದ್ರನಾಥ ರೈ ಬಳ್ಳಮಜಲು, ಶೇಖರ್ ನಾರಾವಿ, ರಾಮಚಂದ್ರ ಕಾಮತ್, ನಗರಸಭೆ ಉಪಾಧ್ಯಕ್ಷೆ ವಿದ್ಯಾ ಆರ್‌ಗೌರಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಗೌರಿ ಬನ್ನೂರು ಮತ್ತು ನಗರಸಭೆ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.