ಶಿವಮೊಗ್ಗ: ಗಾಂಜಾ ಮಾರಾಟ ವಿರೋಧಿಸಿದ್ದಕ್ಕೆ ಅಜ್ಜಿಯನ್ನೇ ಹತ್ಯೆ ಮಾಡಿದ್ದ ಮೊಮ್ಮಗನ ಕಾಲಿಗೆ ಶಿವಮೊಗ್ಗದಲ್ಲಿ ಪೊಲೀಸರು ಗುಂಡೇಟು ನೀಡಿದ್ದಾರೆ.
ಕೊಲೆ ಆರೋಪಿ ಕಿಶೋರ್ (28) ಕಾಲಿಗೆ ಶಿವಮೊಗ್ಗ ನಗರ ಹೊರವಲಯ ವಾಜಪೇಯಿ ಲೇಔಟ್‌ನಲ್ಲಿ ಪೊಲೀಸರು ಗುಂಡೇಟು ನೀಡಿದ್ದಾರೆ. ಆರೋಪಿ ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದ. ತಕ್ಷಣವೇ ದೊಡ್ಡಪೇಟೆ ಇನ್‌ಸ್ಪೆಕ್ಟರ್ ಗಾಳಿಯಲ್ಲಿ ಫೈರ್ ಮಾಡಿ ಆರೋಪಿಗೆ ಎಚ್ಚರಿಕೆ ನೀಡಿದ್ದರು. ಮಾತು ಕೇಳದ ಹಿನ್ನೆಲೆಯಲ್ಲಿ ಕಿಶೋರ್ ಕಾಲಿಗೆ ಫೈರ್ ಮಾಡಿ ಬಂಧಿಸಿದ್ದಾರೆ.
ಗಾಯಾಳು ಕಿಶೋರ್‌ನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪೊಲೀಸ್ ಸಿಬ್ಬಂದಿ ಗಣೇಶ್ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.


























