ಪುತ್ತೂರು, ಜು.2: ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪ ಯುವತಿಗೆ ಕಿರುಕುಳ ನೀಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬುಧವಾರ ಮಧ್ಯಾಹ್ನ ಮಾತಿನ ಚಕಮಕಿ ಮತ್ತು ತಳ್ಳಾಟ ನಡೆದ ಘಟನೆ ವರದಿಯಾಗಿದೆ.
ಘಟನಾ ಸ್ಥಳದಲ್ಲಿ ಕೆಲವರು ಜಮಾಯಿಸಿ ಪರಸ್ಪರ ವಾಗ್ವಾದ ನಡೆಸಿದ್ದು, ಬಳಿಕ ತಳ್ಳಾಟ-ನೂಕಾಟವೂ ನಡೆದಿದೆ ಎನ್ನಲಾಗಿದೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸುವಷ್ಟರಲ್ಲಿ ಘಟನೆಗೆ ಸಂಬಂಧಿಸಿದವರು ಅಲ್ಲಿಂದ ತೆರಳಿದ್ದರು ಎಂದು ತಿಳಿದು ಬಂದಿದೆ.
ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಪೊಲೀಸರು ಘಟನೆ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.


























