ಸುಳ್ಯ: ಚಾಲಕನ ನಿಯಂತ್ರಣ ತಪ್ಪಿದ ನೂತನ ಕಾರೊಂದು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡ ಘಟನೆ ಜುಲೈ 3ರಂದು ಸಂಜೆ ಗಾಂಧಿನಗರದಲ್ಲಿ ನಡೆದಿದೆ.
ಮಂಗಳೂರಿನಿಂದ ನೂತನವಾಗಿ ಖರೀದಿಸಿದ್ದ ಕಾರಿನಲ್ಲಿ ದಂಪತಿ ಮಡಿಕೇರಿ ಕಡೆಗೆ ಪ್ರಯಾಣಿಸುತ್ತಿದ್ದರು. ಗಾಂಧಿನಗರದ ಸಮೀಪಕ್ಕೆ ಬಂದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಮಹಿಳೆಗೆ ಗಾಯಗಳಾಗಿದ್ದು, ಸ್ಥಳೀಯರು ತಕ್ಷಣವೇ ರಕ್ಷಣೆಗೆ ಧಾವಿಸಿ ಅವರನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳುವಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.


























