ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ನಡೆದಿದೆ.ಗಂಗಾವತಿಯ ಪ್ರಶಾಂತನಗರದ ಮನೆಯಲ್ಲಿ ಪತಿ, ಪತ್ನಿ ಹಾಗೂ ಮಗ ನೇಣಿಗೆ ಶರಣಾಗಿದ್ದಾರೆ. ಮೃತರನ್ನು ಪ್ರಕಾಶ್ ರಾಯ್ಕರ್ (54), ಪ್ರಭಾ(46) ಹಾಗೂ ಶಶಾಂಕ್ (21) ಎಂದು ಗುರುತಿಸಲಾಗಿದೆ.
ಪ್ರಕಾಶ್ ರಾಯ್ಕರ್ ಜ್ಯುವೆಲ್ಲರಿ ಶಾಪ್ ನಡೆಸುತ್ತಿದ್ದರು. ಸಾಲಬಾಧೆಯೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಗಂಗಾವತಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನು ಈ ಕುರಿತು ಎಸ್ಪಿ ಡಾ.ರಾಮ್ ಅರಸಿದ್ದಿ ಮಾತನಾಡಿ, ಆತ್ಮಹತ್ಯೆಗೆ ಸಾಲ ಬಾಧೆಯೇ ಪ್ರಮುಖ ಕಾರಣ. ಮಾನ್ವಿ ಬ್ಯಾಂಕ್ ಮನೆ ಸೀಜ್ ಮಾಡಿತ್ತು. ಸೀಜ್ ಆದ ಮನೆಯಲ್ಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಫೆಬ್ರವರಿಯಲ್ಲಿ ಮನೆ ಸೀಜ್ ಆಗಿತ್ತು. ಮನೆಯ ಹಿಂಬದಿಯಿಂದ ಮನೆ ಪ್ರವೇಶ ಮಾಡಿ ಮೂವರು ನೇಣಿಗೆ ಶರಣಾಗಿದ್ದಾರೆ ಎಂದರು.

























