ಪುತ್ತೂರು: ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಪರಸ್ಪರ ಹೊಡೆದಾಡಿಕೊಂಡು ಸಾರ್ವಜನಿಕ ಶಾಂತಿ ಭಂಗಪಡಿಸಿದ ಆರೋಪದಡಿ ಮೂವರು ಸೇರಿದಂತೆ ಇತರರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜುಲೈ 2ರಂದು ಕೆಲ ಯುವಕರು ಬಸ್ ನಿಲ್ದಾಣದ ಬಳಿ ಗಲಾಟೆ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿದಾಗ, ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದರು. ಬಳಿಕ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಹಾಗೂ ವಿಚಾರಣೆ ನಡೆಸಿದ ವೇಳೆ ನಾಸಿರ್, ನವಾಜ್, ನಿಸಾರ್ ಹಾಗೂ ಇತರರು ಸಾರ್ವಜನಿಕ ಸ್ಥಳದಲ್ಲಿ ಪರಸ್ಪರ ಹೊಡೆದಾಡಿಕೊಂಡು ಸಾರ್ವಜನಿಕ ಶಾಂತಿ ಭಂಗಪಡಿಸಿರುವುದು ಬೆಳಕಿಗೆ ಬಂದಿದೆ.
ಈ ಹಿನ್ನೆಲೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS)–2023ರ ಕಲಂ 194(2) ಅಡಿಯಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಆರೋಪಿಗಳ ವಿರುದ್ಧ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.


























