ಪುತ್ತೂರು: ನಿಷೇಧಿತ ಮಾದಕ ವಸ್ತು ಸೇವಿಸಿ ಕೆಮ್ಮಿಂಜೆ ಸಾರ್ವಜನಿಕ ಪ್ರದೇಶದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪುತ್ತೂರು ನಗರ ಪೊಲೀಸ್ ಠಾಣೆ ಪೊಲೀಸರು ಜು.2ರಂದು ಠಾಣಾ ರೌಂಡ್ಸ್ ಕರ್ತವ್ಯದಲ್ಲಿರುವಾಗ ಮಧ್ಯಾಹ್ನ ಕೆಮ್ಮಿಂಜೆ ಗ್ರಾಮದ ಚಾಕೊಲೇಟ್ ಫ್ಯಾಕ್ಟರಿ ಬಳಿಯ ಬಸ್ಸು ತಂಗುದಾಣದ ಬಳಿ ಸಾರ್ವಜನಿಕ ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳು ಅನುಚಿತವಾಗಿ ವರ್ತಿಸುತ್ತಿರುವ ಬಗ್ಗೆ ಬಂದ ಮಾಹಿತಿ ಪ್ರಕಾರ ಅಲ್ಲಿಗೆ ಹೋದಾಗ ವ್ಯಕ್ತಿಗಳಿಬ್ಬರು ತಪ್ಪಿಸಿಕೊಂಡು ಓಡಿ ಹೋಗಲು ಪ್ರಯತ್ನಿಸಿದಾಗ ಪೊಲೀಸರು ವಶಕ್ಕೆ ಪಡೆದು ವಿಚಾರಿಸಿದಾಗ ಅವರು ನಶೆಯಲ್ಲಿದ್ದಂತೆ ಕಂಡುಬಂದಿದ್ದು, ಯಾವುದೋ ನಿಷೇಧಿತ ಮಾದಕ ವಸ್ತುವನ್ನು ಸೇವಿಸಿದವರಂತೆ ಕಂಡು ಬಂದಿದ್ದರು.
ಈ ಬಗ್ಗೆ ಅವರಲ್ಲಿ ವಿಚಾರಿಸಿದಾಗ ಅವರು ಮಾದಕ ವಸ್ತುವನ್ನು ಸೇವಿಸಿರುವುದಾಗಿ ಒಪ್ಪಿಕೊಂಡಿರುತ್ತಾರೆ. ಸಪ್ಟಾನ್ ಮಹಮ್ಮದ್ (31ವ) ಮಹಮ್ಮದ್ ಝನ್ ಪಿ.ಕೆ(26ವ) ಬಂಧಿತ ಆರೋಪಿಗಳು. ಅವರಿಬ್ಬರನ್ನು ಸರಕಾರಿ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿಯವರ ಮುಂದೆ ಹಾಜರುಪಡಿಸಿ ಅಲ್ಲಿನ ವೈದ್ಯಾಧಿಕಾರಿಗಳು ಪರೀಕ್ಷಿಸಿ, ನಿಷೇಧಿತ ಮಾದಕ ವಸ್ತು ಸೇವನೆ ಧೃಡಪಟ್ಟ ಹಿನ್ನಲೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


























