ಪುತ್ತೂರು: ಸಂಜೆ ವೇಳೆ ಸುರಿದ ಭಾರಿ ಗಾಳಿ ಮತ್ತು ಮಳೆಯಿಂದ ಪುತ್ತೂರು ತಾಲೂಕಿನ ಬೆದ್ರಾಳ ಸಮೀಪ ರಸ್ತೆಯ ಮೇಲೆ ಮರ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಕೆಲಕಾಲ ಅಸ್ತವ್ಯಸ್ತಗೊಂಡಿತು.
ಘಟನೆಯ ಮಾಹಿತಿ ದೊರೆಯುತ್ತಿದ್ದಂತೆಯೇ ಸ್ಥಳೀಯರು ಹಾಗೂ ಸಂಬಂಧಪಟ್ಟ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಮರವನ್ನು ತೆರವುಗೊಳಿಸಿ ಸಂಚಾರವನ್ನು ಸುಗಮಗೊಳಿಸಿದರು.
ಇದೇ ವೇಳೆ ಗಾಳಿ-ಮಳೆಯ ತೀವ್ರತೆಗೆ ಹಲವು ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಂಡಿದೆ. ಮೆಸ್ಕಾಂ ಸಿಬ್ಬಂದಿ ವಿದ್ಯುತ್ ಸಂಪರ್ಕ ಪುನಃಸ್ಥಾಪಿಸಲು ದುರಸ್ತಿ ಕಾರ್ಯದಲ್ಲಿ ನಿರತರಾಗಿದ್ದಾರೆ.ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.

























