ಪುತ್ತೂರು: ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲದ ಮಾಸಿಕ ಸಭೆಯು ಬಿಜೆಪಿ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಮನ್ ಕೀ ಬಾತ್, ಮಾ ಕೀ ನಾಮ್ ಏಕ್ ಪೇಡ್ ಸೇರಿದಂತೆ ವಿವಿಧ ಸಂಘಟನಾ ಕಾರ್ಯಕ್ರಮಗಳ ಕುರಿತು ಚರ್ಚೆ ಹಾಗೂ ಅವಲೋಕನ ನಡೆಸಲಾಯಿತು.
ಸಭೆಯ ಸಂದರ್ಭದಲ್ಲಿ ಗ್ರಾಮಾಂತರ ಮಂಡಲ ಯುವಮೋರ್ಚ ಪ್ರಧಾನ ಕಾರ್ಯದರ್ಶಿ ಹುದ್ದೆ ತೆರವಾಗಿದ್ದ ಹಿನ್ನೆಲೆಯಲ್ಲಿ ನಿತೀನ್ ಬೊಡ್ಡೊಣಿಯನ್ನು ನೂತನ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿ ಘೋಷಿಸಲಾಯಿತು.
ಈ ಹಿಂದೆ ಯುವಮೋರ್ಚ ಗ್ರಾಮಾಂತರ ಮಂಡಲದ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ನಿತೀನ್ ಬೊಡ್ಡೊಣಿ, ಪಕ್ಷ ವಹಿಸಿದ್ದ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿ ಸಂಘಟನಾ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಅವರ ಸಂಘಟನಾ ಸಾಮರ್ಥ್ಯ ಹಾಗೂ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಈ ಜವಾಬ್ದಾರಿಯನ್ನು ನೀಡಲಾಗಿದೆ.
ಗ್ರಾಮಾಂತರ ಮಂಡಲ ಯುವಮೋರ್ಚ ಅಧ್ಯಕ್ಷ ಶಿಶಿರ್ ಪೆರ್ವೋಡಿ ಅವರು ನಿತೀನ್ ಬೊಡ್ಡೊಣಿಯವರ ಹೆಸರನ್ನು ಅಧಿಕೃತವಾಗಿ ಘೋಷಿಸಿ, ನೂತನ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸುವಂತೆ ಶುಭ ಹಾರೈಸಿದರು.

























