ವಿಟ್ಲ, ಜುಲೈ 7: ಕಳ್ಳತನ ಪ್ರಕರಣವೊಂದರಲ್ಲಿ ಕಳೆದ ಮೂರು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ವಿಟ್ಲ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 204/2018ರ ಕಳ್ಳತನ ಪ್ರಕರಣದಲ್ಲಿ (ಐಪಿಸಿ ಸೆಕ್ಷನ್ 379) ಆರೋಪಿಯಾಗಿದ್ದ ಬೆಳ್ತಂಗಡಿ ನಿವಾಸಿ ರಾಜೇಶ್ (41) ಕಳೆದ ಮೂರು ವರ್ಷಗಳಿಂದ ಮಾನ್ಯ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.
ಆರೋಪಿಯನ್ನು ವಿಟ್ಲ ಪೊಲೀಸ್ ಠಾಣೆಯ ಎಎಸ್‌ಐ ಜಯರಾಮ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಸಿಪಿಸಿ ವೆಂಕಪ್ಪ (2355) ಹಾಗೂ ಶಿವಾನಂದ (2462) ಅವರು ಜುಲೈ 6, 2026ರಂದು ಮಂಗಳೂರಿನಲ್ಲಿ ಬಂಧಿಸಿ, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದರು.
ವಿಚಾರಣೆ ನಡೆಸಿದ ಮಾನ್ಯ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

























