ಹಾಸನದ ಎಸ್‌ಡಿಎಂ ಆಯುರ್ವೇದ ಕಾಲೇಜಿನ ಸ್ನಾತಕೋತ್ತರ ವಿದ್ಯಾರ್ಥಿಗಳಾದ ಡಾ. ರಶ್ಮಿ ಬೀಳಗಿ, ಡಾ. ಶಾಹಿನ್ ಎಂ ಹಾಗೂ ಡಾ. ಲತಾಶ್ರೀ ಎನ್ ಅವರು ಚಲಿಸುತ್ತಿದ್ದ ರೈಲಿನಲ್ಲಿ ಗರ್ಭಿಣಿಗೆ ಸುರಕ್ಷಿತ ಹೆರಿಗೆ ಮಾಡಿಸಿ ತಾಯಿ-ಮಗುವಿನ ಜೀವ ಉಳಿಸಿದರು.
ಹೆರಿಗೆಯ ವೇಳೆ ಉಂಟಾದ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿಭಾಯಿಸಿದ ಅವರು, ಬಳಿಕ ತಾಯಿ ಮತ್ತು ನವಜಾತ ಶಿಶುವನ್ನು ಮುಂದಿನ ನಿಲ್ದಾಣದಲ್ಲಿ ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆ ಮಾಡಿದರು.

























