ಪುತ್ತೂರು: ತಮ್ಮ ಆತ್ಮೀಯ ಬಾಲ್ಯ ಸ್ನೇಹಿತರಾದ ಶ್ರೀ ನಿರಂಜನ್ ರೈ ಮಠಂತಬೆಟ್ಟು ಅವರ ನಿಧನದ ಹಿನ್ನೆಲೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಅವರು ಮೃತರ ನಿವಾಸಕ್ಕೆ ಭೇಟಿ ನೀಡಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.
ಈ ವೇಳೆ ಶಾಸಕರು ದಿವಂಗತ ನಿರಂಜನ್ ರೈ ಅವರ ಪಾರ್ಥಿವ ಶರೀರಕ್ಕೆ ಪುಷ್ಪನಮನ ಸಲ್ಲಿಸಿ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದರು. ಬಳಿಕ ಮೃತರ ಕುಟುಂಬ ಸದಸ್ಯರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಅವರು, ಈ ದುಃಖವನ್ನು ಭರಿಸುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸಿದರು.
ಅಂತಿಮ ನಮನ ಸಲ್ಲಿಸಲು ಬಂಧು-ಬಳಗ, ಸ್ನೇಹಿತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದಿವಂಗತರಿಗೆ ಗೌರವ ಸಲ್ಲಿಸಿದರು.
























