ಕಾರವಾರ: ಲಾರಿ ಹಾಗೂ ಕ್ರೂಸರ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲೇ 6 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಆರತಿಬೈಲಿನಲ್ಲಿ ನಡೆದಿದೆ.
ಕ್ರೂಸರ್ ಧಾರವಾಡದಿಂದ ಅಂಕೋಲಾ ಕಡೆ ತೆರಳುತ್ತಿದ್ದು, ಲಾರಿ ಯಲ್ಲಾಪುರದಿಂದ ಅಂಕೋಲಾ ಕಡೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಕ್ರೂಸರ್‌ನಲ್ಲಿ ಇದ್ದ ಧಾರವಾಡದ ಬಸವರಾಜ್, ಮಂಜುನಾಥ್ ಚುಲ್ಲಕ್ಕಿ, ಅಭಿಷೇಕ್ ಮಲ್ಲೇಶ್ ಮಡಬಾವಿ, ಅಕ್ಷಯ್ ಮಲ್ಲಣ್ಣನವರ್ ಮೃತಪಟ್ಟಿದ್ದಾರೆ. ಉಳಿದ ಇಬ್ಬರ ಗುರುತು ಪತ್ತೆಯಾಗಬೇಕಿದೆ.
ಮೃತರನ್ನ ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

























