ಪುತ್ತೂರು: ಗೆಲ್ಲು ಕಡಿಯುತ್ತಿದ್ದ ಸಂದರ್ಭ ವಿದ್ಯುತ್ ತಂತಿ ತಗುಲಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಪೆರ್ನೆ ಗ್ರಾಮದ ಚಿಂಕ್ರಗುರಿ ಎಂಬಲ್ಲಿ ನಡೆದಿದೆ.
ಪೆರ್ನೆ ಗ್ರಾಮದ ಚಿಂಕ್ರಗುರಿ ನಿವಾಸಿ ಚಂದಪ್ಪ ಪೂಜಾರಿ ಮೃತಪಟ್ಟ ವ್ಯಕ್ತಿ.
ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಪುತ್ತೂರು ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

























