ತೆಕ್ಕಾರು: ಭಟ್ರಬೈಲು ಶ್ರೀ ದೇವರಗುಡ್ಡೆ ಗೋಪಾಲಕೃಷ್ಣ ದೇವಸ್ಥಾನಕ್ಕೆ ಸಂಪರ್ಕಿಸುವ ರಸ್ತೆಯಲ್ಲಿ ಹಿಟಾಚಿ ಯಂತ್ರವನ್ನು ಸಾಗಿಸುತ್ತಿದ್ದ ಟಿಪ್ಪರ್ ವಾಹನ ಪಲ್ಟಿಯಾದ ಘಟನೆ ಜುಲೈ 9ರಂದು ಸಂಭವಿಸಿದೆ.
ದೇವಸ್ಥಾನದ ಕಡೆ ಕೆಲಸ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಟಿಪ್ಪರ್ ಚಾಲಕ ಹಾಗೂ ಹಿಟಾಚಿ ಅಪರೇಟರ್ ಅದೃಷ್ಟವಶಾತ್ ಯಾವುದೇ ಗಂಭೀರ ಗಾಯಗಳಾಗದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಪಘಾತದಿಂದ ಟಿಪ್ಪರ್ ವಾಹನಕ್ಕೆ ಹಾನಿಯಾಗಿದ್ದು, ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

























