ಪುಂಜಾಲಕಟ್ಟೆ–ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಪಣಕಜೆ ಸಮೀಪದ ಸಬರಬೈಲು ಪ್ರದೇಶದಲ್ಲಿ ಜುಲೈ 9ರಂದು ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.
ಮಡಂತ್ಯಾರಿನಿಂದ ಬೆಳ್ತಂಗಡಿ ಕಡೆಗೆ ಸಾಗುತ್ತಿದ್ದ ಕಾರು ಏಕಾಏಕಿ ಚಾಲಕರ ನಿಯಂತ್ರಣ ತಪ್ಪಿ ರಸ್ತೆ ಮೇಲೆ ಪಲ್ಟಿಯಾಗಿದೆ. ಪರಿಣಾಮ ಕಾರಿನ ಗಾಜುಗಳು ಸಂಪೂರ್ಣ ಪುಡಿಯಾಗಿದ್ದು, ವಾಹನವು ನಜ್ಜುಗುಜ್ಜಾಗಿದೆ. ಅಪಘಾತದ ಬಳಿಕ ಕಾರು ಮಡಂತ್ಯಾರು ಕಡೆಗೆ ಮುಖಮಾಡಿ ನಿಂತಿರುವುದು ಕಂಡುಬಂದಿದೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಯಾವುದೇ ಪ್ರಾಣಾಪಾಯವಿಲ್ಲದೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು, ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದೆ.
























