ಪುರುಷರಗಟ್ಟೆ ಪ್ರಕರಣದ ಸಂತ್ರಸ್ತೆಯ ಮನೆಗೆ ಇಂದು ಸಂಜೆ 5.00 ಗಂಟೆಗೆ ಭಾರತೀಯ ಜನತಾ ಪಾರ್ಟಿಯ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಸತೀಶ್ ಕುಂಪಲ ಅವರ ನೇತೃತ್ವದ ಜಿಲ್ಲಾ ಪದಾಧಿಕಾರಿಗಳ ತಂಡ ಭೇಟಿ ನೀಡಲಿದೆ.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು, ಹಾಗೂ ಪಕ್ಷದ ಜಿಲ್ಲಾ ಪ್ರಮುಖರು ಉಪಸ್ಥಿತರಿದ್ದು, ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಿ ಧೈರ್ಯ ತುಂಬಲಿದ್ದಾರೆ.
























