ಕಡಬ: ಸುಬ್ರಹ್ಮಣ್ಯ ಸಮೀಪದ ಅಜ್ಜಿಹಿತ್ಲುವಿನ ಖಾಸಗಿ ಲಾಡ್ಜ್‌ನಲ್ಲಿ ತಂಗಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.
ಮೃತರನ್ನು ರಾಮನಗರ ಜಿಲ್ಲೆಯ ಉಚ್ಚಮ್ಮನದೊಡ್ಡಿ ನಿವಾಸಿ ಮಧು ಎಸ್ (30) ಎಂದು ಗುರುತಿಸಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ಮಧು ಎಸ್ ಅವರು ಜುಲೈ 8ರಂದು ಅಜ್ಜಿಹಿತ್ಲುವಿನ ಲಾಡ್ಜ್‌ನಲ್ಲಿ ಬಾಡಿಗೆ ಕೊಠಡಿ ಪಡೆದಿದ್ದರು. ಜುಲೈ 9ರಂದು ಸಂಜೆ ಅವರು ತಂಗಿದ್ದ ಕೊಠಡಿಯ ಬಾಗಿಲು ತೆರೆಯುವಂತೆ ಸಿಬ್ಬಂದಿ ಸೂಚಿಸಿದರೂ ಯಾವುದೇ ಪ್ರತಿಕ್ರಿಯೆ ದೊರೆಯಲಿಲ್ಲ. ಅನುಮಾನಗೊಂಡ ಸಿಬ್ಬಂದಿ ಕಿಟಕಿಯಿಂದ ಪರಿಶೀಲಿಸಿದಾಗ, ಮಧು ಎಸ್ ಅವರು ಕೊಠಡಿಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತಪಟ್ಟಿರುವುದು ಕಂಡುಬಂದಿತು.
ಈ ಕುರಿತು ಲಾಡ್ಜ್‌ನ ಲೀಝುದಾರ ಜಗದೀಶ್ ಪಡ್ಪು ಅವರು ನೀಡಿದ ದೂರಿನ ಮೇರೆಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಸಂಖ್ಯೆ 15/2026 ದಾಖಲಿಸಲಾಗಿದೆ. ಬಿಎನ್‌ಎಸ್‌ಎಸ್ ಕಲಂ 194(3)(4) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಸಾವಿನ ನಿಖರ ಕಾರಣ ಕುರಿತು ತನಿಖೆ ನಡೆಸುತ್ತಿದ್ದಾರೆ.
























