ಮುಂಡಾಜೆ ಗ್ರಾಮ ಪಂಚಾಯತ್ ಸಿಬ್ಬಂದಿಯಾಗಿದ್ದ ಶಾರದಾ ನಗರ ನಿವಾಸಿ ಜನಾರ್ದನ ನಾಯ್ಕ (30) ಅವರು ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ತಮ್ಮ ಸ್ವಗೃಹದಲ್ಲಿ ನಿಧನರಾದರು.
ಸೌಮ್ಯ ಸ್ವಭಾವ ಹಾಗೂ ಕರ್ತವ್ಯನಿಷ್ಠೆಯಿಂದ ಗುರುತಿಸಿಕೊಂಡಿದ್ದ ಜನಾರ್ದನ ನಾಯ್ಕ ಅವರ ಅಗಲಿಕೆ ಕುಟುಂಬಸ್ಥರು, ಬಂಧು-ಬಳಗ ಹಾಗೂ ಗ್ರಾಮಸ್ಥರಲ್ಲಿ ದುಃಖದ ವಾತಾವರಣ ಮೂಡಿಸಿದೆ.
ಮೃತರು ತಾಯಿ ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.

























