ವಿಜಯಪುರ: ನಿದ್ದೆ ಮಂಪರಿನಲ್ಲಿ ವೇಗವಾಗಿ ಕಾರು ಚಲಾಯಿಸಿದ ಪರಿಣಾಮ ಡಿವೈಡರ್ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮನಗೂಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಘಟನೆ ನಡೆದಿದೆ.
ತಾಯಿ ಸತ್ಯವೇಣಿ (38), ಪುತ್ರ ಹರಿವೆಂಕಟರಾಮ್ (20), ಜಶ್ವಂತ (18) ಮೃತರು. ತಂದೆ ರಾಘವೇಂದ್ರ ಅವರು (41) ಗಂಭೀರವಾಗಿ ಗಾಯಗೊಂಡಿದ್ದಾರೆ.
KA 33 N 4689 ನಂಬರ್‌ನ ಕ್ರೇಟಾ ಕಾರು ಅಪಘಾತಕ್ಕೆ ಒಳಗಾಗಿದೆ. ಕುಟುಂಬಸ್ಥರು ಎಲ್ಲರೂ ಸೇರಿ ಕಾರಿನಲ್ಲಿ ಕಾರಟಗಿಯಿಂದ ಶಿರಡಿಗೆ ತೆರಳುತ್ತಿದ್ದರು. ಹರಿವೆಂಕಟರಾಮ್ ಕಾರು ಚಲಾಯಿಸುತ್ತಿದ್ದ. ಆದರೆ ಹಿಂದಿನ ದಿನ ರಾತ್ರಿಯಿಡೀ ನಿದ್ದೆಗೆಟ್ಟು ಕುಟುಂಬಸ್ಥರು ಸೇರಿಕೊಂಡು ಸಾಮಾನು ಪ್ಯಾಕ್ ಮಾಡಿಕೊಂಡಿದ್ದಂತೆ.ನಿದ್ದೆಯ ಮಂಪರಿನಲ್ಲಿ ವೇಗವಾಗಿ ಕಾರು ಚಲಾಯಿಸಿದ್ದೆ ಘಟನೆಗೆ ಕಾರಣ ಎನ್ನಲಾಗಿದೆ.
ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

























