ವಿಟ್ಲ: ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಜು.11ರಂದು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.
ಬಂಟ್ವಾಳ ತಾಲೂಕು ಬೋಳಂತೂರು ದಂಡೆಮಾರ್ ನಿವಾಸಿ ಅಬ್ದುನ್ನಾಸಿರ್ (ನಾಸಿರ್ ದಂಡೆಮಾರ್) ಮೃತಪಟ್ಟವರು.
ಜು.4 ರಂದು ನಾಸಿರ್‌ರವರು ಸಂಚರಿಸುತ್ತಿದ್ದ ದ್ವಿಚಕ್ರವಾಹನ ಹಾಗೂ ಆಟೋ ರಿಕ್ಷಾದ ಈ ಮಧ್ಯೆ ಅಪಘಾತ ಸಂಭವಿಸಿತ್ತು. ಅಪಘಾತದ ತೀವ್ರತೆಗೆ ನಾಸಿರ್ ಅವರ ತಲೆ ಹಾಗೂ ದೇಹದ ಇತರೆ ಭಾಗಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದವು. ತಕ್ಷಣವೇ ಅವರನ್ನು ಮಂಗಳೂರಿನ ಎ.ಜೆ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

























