ವಿಟ್ಲ: ಹೃದಯಾಘಾತದಿಂದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ವಿಟ್ಲದಲ್ಲಿ ನಡೆದಿದೆ.
ಮೂದುರು ಚಂದಳಿಕೆ ನಿವಾಸಿ ಕುಶಾಲಪ್ಪ ಗೌಡ (54) ಮೃತಪಟ್ಟ ವ್ಯಕ್ತಿ.
ಕುಶಾಲಪ್ಪ ರವರು ಮನೆಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಏಕಾಏಕಿ ಕುಸಿದು ಬಿದ್ದಿದ್ದರು ಕೂಡಲೇ ಆಸ್ಪತ್ರೆಗೆ ರವಾನಿಸಲಾಯಿತಾದರೂ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.
ಮೃತರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

























