ಪುತ್ತೂರು: ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧಿಸಲಿದೆ ಎಂಬ ಸಂದೇಶದ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸ್ಥಳೀಯ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ‘ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ಖಚಿತ’ ಎಂಬ ಶೀರ್ಷಿಕೆಯೊಂದಿಗೆ ಪ್ರಕಟವಾಗಿರುವ ಪೋಸ್ಟರ್‌ನಲ್ಲಿ, “ಕಾಯಕಕರ್ತರ ಭಾವನೆಗೆ ಸೈ ಎಂದ ನಾಯಕ”, “ನಮ್ಮ ಗ್ರಾಮ, ನಮ್ಮ ಅಭಿಮಾನ” ಎಂಬ ಘೋಷಣೆಗಳನ್ನು ಉಲ್ಲೇಖಿಸಲಾಗಿದೆ.
ಗ್ರಾಮವನ್ನು ಜನರಿಗೆ, ಜನರನ್ನು ಸಂಘಟನೆಗೆ, ಗ್ರಾಮದ ಅಭಿವೃದ್ಧಿಗಾಗಿ ಹಾಗೂ ಉತ್ತಮಾಯಕ ಆಡಳಿತಕ್ಕಾಗಿ ಚುನಾವಣೆ ಎದುರಿಸುವ ಸಂದೇಶವೂ ಪೋಸ್ಟರ್‌ನಲ್ಲಿ ಕಾಣಿಸಿಕೊಂಡಿದೆ.
ಪೋಸ್ಟರ್‌ನಲ್ಲಿ ಪುತ್ತಿಲ ಪರಿವಾರದ ಪ್ರಮುಖ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರ ಭಾವಚಿತ್ರವಿದ್ದು, ಗ್ರಾಮ ಪಂಚಾಯತ್ ಮಟ್ಟದಲ್ಲಿಯೂ ಸಂಘಟನೆ ತನ್ನ ಅಸ್ತಿತ್ವವನ್ನು ಬಲಪಡಿಸುವ ಸೂಚನೆ ನೀಡಿದೆ ಎನ್ನುವ ವಿಶ್ಲೇಷಣೆ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.
ಈ ಪೋಸ್ಟರ್ ಅಧಿಕೃತ ಚುನಾವಣಾ ಅಭ್ಯರ್ಥಿಗಳ ಘೋಷಣೆಯೇ ಅಥವಾ ಸಂಘಟನೆಯ ಪ್ರಚಾರ ಅಭಿಯಾನದ ಭಾಗವೇ ಎಂಬ ಕುರಿತು ಇನ್ನೂ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಆದರೆ, ಗ್ರಾಮ ಪಂಚಾಯತ್ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಈ ಪೋಸ್ಟರ್ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಸ್ಥಳೀಯ ರಾಜಕೀಯದಲ್ಲಿ ಹೊಸ ಬೆಳವಣಿಗೆಗೆ ನಾಂದಿ ಹಾಡುವ ಸಾಧ್ಯತೆಗಳ ಬಗ್ಗೆ ಚರ್ಚೆ ನಡೆಯುತ್ತಿದೆ.
























