ಪುತ್ತೂರು: ಕಣಚೂರು ಆಸ್ಪತ್ರೆ ಹಾಗೂ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಾದ ಡಾ. ಹಾಜಿ ಯು.ಕೆ. ಮೋನು ಕಣಚೂರು ಅವರ ಜನ್ಮದಿನ ಹಾಗೂ ಕಣಚೂರು ಫೌಂಡೇಶನ್ ಡೇ ಅಂಗವಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಸಮಾಜಮುಖಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಆಸ್ಪತ್ರೆಯ ಸಿಬ್ಬಂದಿ, ಒಳರೋಗಿಗಳು, ಹೊರರೋಗಿಗಳು ಹಾಗೂ ಅವರೊಂದಿಗೆ ಬಂದಿದ್ದ ಸಹಚರರಿಗೆ ಮಧ್ಯಾಹ್ನದ ಊಟ ವಿತರಿಸುವ ಮೂಲಕ ಡಾ. ಮೋನು ಕಣಚೂರು ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಶ್ರೀಮತಿ ಶಕುಂತಲಾ ಟಿ. ಶೆಟ್ಟಿ, ಪುತ್ತೂರು ಸರ್ಕಾರಿ ಆಸ್ಪತ್ರೆಯ ಮೆಡಿಕಲ್ ಆಫೀಸರ್ ಡಾ. ಯಧುರಾಜ್, ನಗರಸಭೆಯ ಮಾಜಿ ಅಧ್ಯಕ್ಷೆ ಜಯಂತಿ ಬಲ್ನಾಡ್, ಮೊಹಮ್ಮದ್ ಉನೈಸ್, ಆದ್ಯ ಗ್ರೂಪ್‌ನ ಮಾಲಕರಾದ ಅಶೋಕ್ ರಾವ್ ಬಪ್ಪಳಿಗೆ, ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ನೀರಜ್ ಮರೀಲ್ ಹಾಗೂ ಶೇಖರ್, ಹನೀಫ್ ಪಾಟ್ರಕೋಡಿ, ಶಾರದಾ ಅರಸು, ಸಮರ್ಪಣ ಮಹಿಳಾ ಮಂಡಳಿಯ ಕಾರ್ಯದರ್ಶಿ ಸುಜಯ ರೈ, ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷೆ ಶುಭಮಾಲಿನಿ ಮಲ್ಲಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸಮಾಜ ಸೇವೆಯ ಮೂಲಕ ಜನ್ಮದಿನವನ್ನು ಆಚರಿಸಿರುವ ಈ ಕಾರ್ಯಕ್ರಮಕ್ಕೆ ಆಸ್ಪತ್ರೆಯ ಸಿಬ್ಬಂದಿ ಹಾಗೂ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಯಿತು.

























