ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪರಂಗೀಪೇಟೆಯ ಮೆನೆಜಸ್ ಪ್ಲಾಜಾ (Menezes Plaza) ಕಾಂಪ್ಲೆಕ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆನರಾ ಬ್ಯಾಂಕ್‌ನ ಪರಂಗೀಪೇಟೆ ಶಾಖೆಯಲ್ಲಿ ಕಳ್ಳತನಕ್ಕೆ ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ.
ಜುಲೈ 12ರ ರಾತ್ರಿ ವೇಳೆ ದುಷ್ಕರ್ಮಿಗಳು ಬ್ಯಾಂಕಿನ ಮೇಲ್ಛಾವಣಿಯನ್ನು ತುಂಡರಿಸಿ ಒಳನುಗ್ಗಿರುವುದಾಗಿ ತಿಳಿದುಬಂದಿದೆ. ಸೋಮವಾರ ಬೆಳಿಗ್ಗೆ ಬ್ಯಾಂಕ್ ಸಿಬ್ಬಂದಿ ಬ್ಯಾಂಕ್ ತೆರೆದ ವೇಳೆ ಘಟನೆ ಪತ್ತೆಯಾಗಿದೆ.
ಮಾಹಿತಿ ತಿಳಿದ ತಕ್ಷಣ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆರಳಚ್ಚು ತಜ್ಞರ ತಂಡ ಹಾಗೂ ಸೋಕೋ (SOCO) ತಂಡವೂ ಸ್ಥಳ ಪರಿಶೀಲನೆ ನಡೆಸಿ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದೆ.
ಪ್ರಾಥಮಿಕ ತನಿಖೆಯಲ್ಲಿ ಬ್ಯಾಂಕ್‌ನಿಂದ ಯಾವುದೇ ನಗದು ಅಥವಾ ಇತರೆ ಬೆಲೆಬಾಳುವ ವಸ್ತುಗಳು ಕಳ್ಳತನವಾಗಿಲ್ಲ ಎಂಬುದು ತಿಳಿದುಬಂದಿದೆ. ಸ್ಥಳದ ಸಂಪೂರ್ಣ ಪರಿಶೀಲನೆಯ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಲಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

























