ಪುತ್ತೂರಿನ ಪುರುಷರಕಟ್ಟೆಯಲ್ಲಿ ನಡೆದ ಘಟನೆಯಲ್ಲಿ ಪೊಲೀಸರ ಪಕ್ಷಪಾತ ನಡೆ ಮತ್ತು ನ್ಯಾಯ ನಿರಾಕರಣೆ ವಿರುದ್ದ ಹಸ್ತಕ್ಷೇಪದ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಸೋಮವಾರ ಪುತ್ತೂರಿನ ಉಪವಿಭಾಗಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ದೂರು ಸಲ್ಲಿಸಿದರು.
ತನಿಖೆ ನಿಷ್ಪಕ್ಷಪಾತವಾಗಿ ನಡೆಸಲಾಗಿಲ್ಲ ಎಂಬ ತೀವ್ರ ಕಳವಳ ನನಗಿದೆ. ನ್ಯಾಯಯುತ ಮತ್ತು ನಿಷ್ಪಕ್ಷಪಾತ ತನಿಖೆಯನ್ನು ಪಡೆಯುವ ಬದಲು, ಈ ಪ್ರಕರಣದಲ್ಲಿ ನಾನು ಆರೋಪಿಯಂತೆ ಪರಿಗಣಿಸಲ್ಪಡುತ್ತಿದ್ದೇನೆ. ಸಾರ್ವಜನಿಕ ಅಧಿಕಾರಿಗಳಿಂದ ಪಕ್ಷಪಾತ, ಅಧಿಕಾರದ ದುರ್ಬಳಕೆ ಅಥವಾ ಕರ್ತವ್ಯ ಲೋಪ ಕಂಡುಬಂದರೆ ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆನಿರ್ದೇಶನ ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.
ಪುತ್ತೂರು ಉಪ ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ದೂರು ಸ್ವೀಕರಿಸಿದರು. ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ, ಪುತ್ತೂರು ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್, ಪ್ರಧಾನ ಕಾರ್ಯದರ್ಶಿಗಳಾದ ಲೋಕೇಶ್ ಚಾಕೋಟೆ, ಸುನೀಲ್ ದಡ್ಡು, ನಗರ ಮಂಡಲದ ಅಧ್ಯಕ್ಷ ಶಿವಕುಮಾರ್‌ಕಲ್ಲಿಮಾರ್, ಕಾರ್ಯದರ್ಶಿ ಮಣಿಕಂಠ, ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಆರ್‌ಸಿ ನಾರಾಯಣ, ವಿಹಿಂಪ ಜಿಲ್ಲಾಧ್ಯಕ್ಷ ಕೃಷ್ಣಪ್ರಸನ್ನ, ಜಿಲ್ಲಾ ಧಾರ್ಮಿಕ ಪರಿಷತ್ ಮಾಜಿ ಸದಸ್ಯ ಮುರಳೀಕೃಷ್ಣ ಹಸಂತಡ್ಕ ಮತ್ತಿತರರು ಉಪಸ್ಥಿತರಿದ್ದರು.


























