ಉಪ್ಪಿನಂಗಡಿ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪೆರಿಯಡ್ಕದ ಬೊಳ್ಳಾವಿನಲ್ಲಿ ನಡೆದಿದೆ.
ಯೋಗೀಶ್ ಯಾನೆ ಸಂಕೇತ್ (25) ಆತ್ಮಹತ್ಯೆ ಮಾಡಿಕೊಂಡ ಯುವಕ. ಕೂಲಿಕಾರ್ಮಿಕನಾಗಿದ್ದ ಈತ ಜು.13ರಂದು ರಾತ್ರಿ ಏಳರ ಸುಮಾರಿಗೆ ಮನೆಯ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದು, ವಿಷಯ ತಿಳಿದ ಮನೆಯವರು ತಕ್ಷಣವೇ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಈತನನ್ನು ಆಸ್ಪತ್ರೆಗೆ ಸಾಗಿಸಿದರಾದರೂ, ಆಸ್ಪತ್ರೆ ತಲುಪುವಷ್ಟರಲ್ಲೇ ಈತ ಮೃತಪಟ್ಟಿದ್ದಾನೆ.
ಕಳೆದ ಎರಡು ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಈತನಿಗೆ ಶಿವಮೊಗ್ಗದ ಆಸ್ಪತ್ರೆಯಿಂದ ಚಿಕಿತ್ಸೆ ಕೊಡಿಸಲಾಗುತ್ತಿತ್ತು ಎನ್ನಲಾಗಿದೆ. ಮೃತನು ತಂದೆ, ತಾಯಿ, ಸಹೋದರ, ಸಹೋದರಿಯನ್ನು ಅಗಲಿದ್ದಾನೆ.


























