ಉಜಿರೆ: ಉಜಿರೆ ಸರ್ಕಲ್‌ನ ಸಾರ್ವಜನಿಕ ಶೌಚಾಲಯದ ಬಳಿ ಸುಮಾರು 55 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯ ಶವ ಬುಧವಾರ ಮುಂಜಾನೆ ಪತ್ತೆಯಾಗಿದೆ.
ಸ್ಥಳೀಯರು ಶವವನ್ನು ಗಮನಿಸಿ ತಕ್ಷಣ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಬಳಿಕ ಸ್ಥಳಕ್ಕೆ ಆಗಮಿಸಿದ ಧನ್ವಿ ಆಂಬುಲೆನ್ಸ್ ಸಿಬ್ಬಂದಿ ಶವವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರು.
ಮೃತನ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಮೃತನ ಗುರುತು ಅಥವಾ ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

























