ಕಡಬ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಸುಬ್ರಮಣ್ಯ ಪೊಲೀಸರು ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ದೂರುದಾರರ ಅಪ್ರಾಪ್ತ ವಯಸ್ಸಿನ ಮಗಳು ಜುಲೈ 7ರಂದು ಕಡಬ ತಾಲೂಕಿನ ಏನೆಕಲ್ಲು ಗ್ರಾಮದ ತನ್ನ ಸ್ನೇಹಿತೆಯ ಮನೆಗೆ ತೆರಳಿದ್ದು, ಜುಲೈ 9ರಂದು ಮನೆಗೆ ಮರಳಿದ್ದಳು. ಈ ನಡುವೆ ಜುಲೈ 8ರಂದು ಮಧ್ಯಾಹ್ನ, ಬಾಲಕಿ ಸ್ನೇಹಿತೆಯ ಮನೆಯಲ್ಲಿದ್ದ ವೇಳೆ ಮೋಕ್ಷಿತ್ ಎಂಬಾತ ಆಕೆಯನ್ನು ಮನೆಯ ಸಮೀಪಕ್ಕೆ ಕರೆದುಕೊಂಡು ಹೋಗಿ ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿ ಜೀವ ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ.
ಈ ದೂರಿನ ಮೇರೆಗೆ ಸುಬ್ರಮಣ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 29/2026 ದಾಖಲಿಸಿ, ಭಾರತೀಯ ನ್ಯಾಯ ಸಂಹಿತೆ (BNS) ಕಲಂ 65(1), 351(2) ಹಾಗೂ ಪೋಕ್ಸೋ (POCSO) ಕಾಯ್ದೆಯ ಕಲಂ 4ರಡಿ ಪ್ರಕರಣ ದಾಖಲಿಸಲಾಗಿದೆ.
ಪ್ರಕರಣದ ತನಿಖೆ ಮುಂದುವರಿದಿದ್ದು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.


























