ಬಂಟ್ವಾಳದ ಬಿಸಿ ರೋಡ್‌ನಲ್ಲಿ ಇಂದು ಸಂಜೆ ನಡೆದ ಯುವತಿಯ ಅಮಾನುಷ ಹತ್ಯೆ ಪ್ರಕರಣವನ್ನು ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳ ಪುತ್ತೂರು ಜಿಲ್ಲಾ ಘಟಕ ಖಂಡಿಸಿದೆ.
ಈ ಕುರಿತು ಪ್ರಕಟಣೆ ನೀಡಿರುವ ಸಂಘಟನೆಯು, ಪ್ರಕರಣದ ಆರೋಪಿ ಯಾರೆ ಆಗಿರಲಿ ತಕ್ಷಣ ಬಂಧಿಸಿ, ಕಾನೂನಿನ ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.
ಇಂತಹ ಹೇಯ ಕೃತ್ಯಗಳು ಸಮಾಜದಲ್ಲಿ ಆತಂಕ ಮತ್ತು ಅಸುರಕ್ಷಿತ ಭಾವನೆ ಮೂಡಿಸುತ್ತವೆ. ಆದ್ದರಿಂದ ಪೊಲೀಸರು ಪ್ರಕರಣದ ಸಮಗ್ರ ತನಿಖೆ ನಡೆಸಿ, ಶೀಘ್ರವೇ ಆರೋಪಿಯನ್ನು ಬಂಧಿಸಿ ನ್ಯಾಯದ ಮುಂದೆ ಹಾಜರುಪಡಿಸಬೇಕು ಎಂದು ವಿಶ್ವ ಹಿಂದೂ ಪರಿಷದ್–ಬಜರಂಗದಳ ಪುತ್ತೂರು ಜಿಲ್ಲಾ ಘಟಕ ಒತ್ತಾಯಿಸಿದೆ.


























