ಬೆಳ್ತಂಗಡಿ: ಬಂಟ್ವಾಳ ತಾಲೂಕಿನಲ್ಲಿ ಅಮಾಯಕ ಯುವತಿಯ ಹತ್ಯೆ ನಡೆದಿರುವ ಘಟನೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಇಂತಹ ಅಮಾನವೀಯ ಘಟನೆಗಳು ಸಮಾಜದಲ್ಲಿ ಮತ್ತೆ ಮರುಕಳಿಸಬಾರದು ಎಂದು ಹೇಳಿದ್ದಾರೆ. ಪ್ರಕರಣದ ಆರೋಪಿ ಯಾರೇ ಆಗಿದ್ದರೂ ಅವರನ್ನು ತಕ್ಷಣ ಬಂಧಿಸಿ, ಕಾನೂನು ಪ್ರಕಾರ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ.
ಯಾವುದೇ ಒತ್ತಡಕ್ಕೆ ಮಣಿಯದೆ ಪೊಲೀಸ್ ಇಲಾಖೆ ನಿಷ್ಪಕ್ಷಪಾತ ತನಿಖೆ ನಡೆಸಿ, ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಮೃತ ಯುವತಿಯ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ. ಅವರ ದುಃಖದಲ್ಲಿ ತಾನೂ ಭಾಗಿಯಾಗಿದ್ದೇನೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.

























