ಬಂಟ್ವಾಳ: ಬಂಟ್ವಾಳದಲ್ಲಿ ನಡೆದ ಯುವತಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಕಕ್ಕೆಪದವಿನ ನಿವಾಸಕ್ಕೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ಮಗಳ ಅಗಲಿಕೆಯ ದುಃಖದಲ್ಲಿರುವ ತಂದೆ-ತಾಯಿ ಹಾಗೂ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ ಸಚಿವರು, ಈ ಘಟನೆ ಅತ್ಯಂತ ದುಃಖಕರವಾಗಿದ್ದು, ಇಂತಹ ಅಮಾನವೀಯ ಕೃತ್ಯಗಳು ಸಮಾಜವೇ ತಲೆತಗ್ಗಿಸುವಂತಿವೆ ಎಂದು ವಿಷಾದ ವ್ಯಕ್ತಪಡಿಸಿದರು. ಕುಟುಂಬದ ನೋವಿನಲ್ಲಿ ತಾವು ಸಹ ಭಾಗಿಯಾಗಿರುವುದಾಗಿ ತಿಳಿಸಿ, ಧೈರ್ಯ ಕಳೆದುಕೊಳ್ಳದಂತೆ ಕುಟುಂಬಕ್ಕೆ ಆತ್ಮಸ್ಥೈರ್ಯ ತುಂಬಿದರು.
ಪ್ರಕರಣದ ಕುರಿತು ಪೊಲೀಸ್ ಇಲಾಖೆ ಕಾನೂನುಬದ್ಧ ಕ್ರಮ ಕೈಗೊಂಡಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಬೇಕೆಂದು ಸಚಿವರು ಅಭಿಪ್ರಾಯಪಟ್ಟರು. ಈ ಸಂದರ್ಭದಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರು, ಸಾರ್ವಜನಿಕರು ಹಾಗೂ ಕುಟುಂಬದ ಆಪ್ತರು ಉಪಸ್ಥಿತರಿದ್ದರು.

























