ಮೈಸೂರು: ಬೈಕ್ ಸ್ಕಿಡ್ ಆಗಿ ಅಪಘಾತ ಸಂಭವಿಸಿದ ಪರಿಣಾಮ ನವವಿವಾಹಿತೆ ಸಾವನ್ನಪ್ಪಿರುವ ಘಟನೆ ಮೈಸೂರಿನ ಆರ್.ಟಿ.ನಗರದ ಸಮೀಪ ನಡೆದಿದೆ.
ಮೈಸೂರು ತಾಲೂಕಿನ ಮಾಕನಹುಂಡಿ ಗ್ರಾಮದ ಮೇಘನಾ (20) ಮೃತಪಟ್ಟ ಯುವತಿ. ಗುರುವಾರ ಸಂಜೆ ಮನೆಗೆ ಮರಳುತ್ತಿದ್ದ ವೇಳೆ ದಂಪತಿ ಪ್ರಯಾಣಿಸುತ್ತಿದ್ದ ಬೈಕ್ ಸ್ಕಿಡ್ ಆಗಿ ಅಪಘಾತ ಸಂಭವಿಸಿದೆ.
ಮೇಘನಾ ಕೇವಲ 15 ದಿನಗಳ ಹಿಂದಷ್ಟೇ ಬಿದರಗೂಡು ಗ್ರಾಮದ ಪುನೀತ್ ಅವರೊಂದಿಗೆ ವಿವಾಹವಾಗಿದ್ದರು. ಅಪಘಾತದ ವೇಳೆ ಹೆಲ್ಮೆಟ್ ಧರಿಸದಿದ್ದ ಹಿನ್ನೆಲೆ ಮೇಘನಾ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಪತಿ ಪುನೀತ್ ಅವರ ತಲೆ, ಕೈ ಹಾಗೂ ಕಾಲಿಗೆ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

























